Sunday, October 13, 2024
Homeಬೆಂಗಳೂರುಬೆಂಗಳೂರು : ಕಾರಿನಲ್ಲಿ ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ

ಬೆಂಗಳೂರು : ಕಾರಿನಲ್ಲಿ ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ

ಬೆಂಗಳೂರು,ಏ.25- ನಗರದಲ್ಲಿ ಯುವತಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 23 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕ್ರೂರ ಹಿಂಸೆ ನೀಡಿದ ಘಟನೆಗೆ ಸಂಬಂಧಿಸಿದಂತೆ ಹೈಗ್ರೌಂಡ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶೇಷಾದ್ರಿಪುರಂ ನಿವಾಸಿ ಸುಮಾರು 23 ವರ್ಷದ ಯುವತಿಯನ್ನು ಕಳೆದ ಎರಡು ದಿನಗಳ ಹಿಂದೆ ಅಪಹರಿಸಿದ ಮೂವರು ನಂತರ ಆಕೆಯನ್ನು ಬೆಂಗಳೂರು ಹೊರವಲಯಕ್ಕೆ ಕರೆದೊಯ್ದು ಅತ್ಯಾಚಾರ ವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಅವರಿಂದ ತಪ್ಪಿಸಿಕೊಂಡು ಬಂದ ಯುವತಿ ಮನೆಯವರಿಗೆ ವಿಷಯ ತಿಳಿಸಿದ್ದು, ತಕ್ಷಣ ಕುಟುಂಬ ಸದಸ್ಯರು ಹೈಗ್ರೌಂಡ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತಕ್ಷಣವೇ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿ ಸ್ಥಳೀಯ ಸಿಸಿ ಕ್ಯಾಮೆರಾವನ್ನು ವಶಪಡಿಸಿಕೊಂಡು ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ.

ರಾತ್ರಿಯೇ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ಸಹಕಾರ ನೀಡಿರುವ ಇನ್ನು ಹಲವರು ಇರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರೆದಿದೆ.

RELATED ARTICLES

Latest News