Monday, May 20, 2024
Homeಬೆಂಗಳೂರುಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ ಹಾಕಿದವನಿಗೆ ಪೊಲೀಸರು ಶೋಧ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ ಹಾಕಿದವನಿಗೆ ಪೊಲೀಸರು ಶೋಧ

ಬೆಂಗಳೂರು, ಮೇ 8- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಹಾಕಿದ್ದ ಆರೋಪಿಗಾಗಿ ವಿಮಾನ ನಿಲ್ದಾಣ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್‌ 1 ಮತ್ತು ಕೆಲವು ವಿಮಾನಗಳಲ್ಲಿ ಟೈಮ್‌ ಬಾಂಬ್‌ ಇಡಲಾಗಿದೆ. ಅದು ಕೆಲವೇ ಗಂಟೆಗಳಲ್ಲಿ ಸ್ಪೋಟಗೊಳ್ಳಲಿದೆ ಎಂದು ಅಪರಿಚಿತ ಆರೋಪಿಯೊಬ್ಬ ಮೇ 2ರಂದು ಇ-ಮೇಲ್‌ ಮಾಡಿದ್ದನು.

ಈ ಸಂದೇಶವನ್ನು ಗಮನಿಸಿದ ವಿಮಾನ ನಿಲ್ದಾಣದ ಅಕಾರಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಬಾಂಬ್‌ ನಿಷ್ಕ್ರಿಯ ದಳ, ಬಾಂಬ್‌ ಪತ್ತೆ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಹುಸಿ ಸಂದೇಶ ಎಂಬುವುದು ಗೊತ್ತಾಗಿದೆ.

ಈ ಬಗ್ಗೆ ವಿಮಾನ ನಿಲ್ದಾಣದ ಟರ್ಮಿನಲ್‌ ಮ್ಯಾನೇಜರ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಇ-ಮೇಲ್‌ ಮಾಡಿದ್ದ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

RELATED ARTICLES

Latest News