ಬೆಂಗಳೂರು,ಜು.5– ಆಟೋದಲ್ಲಿ ಡ್ರಾಪ್ ಕೊಡುವುದಾಗಿ ಹೇಳಿ ಪ್ರಯಾಣಿಕನನ್ನು ಹತ್ತಿಸಿಕೊಂಡ ಚಾಲಕ ಮಾರ್ಗಮಧ್ಯೆ ಬೆದರಿಸಿ ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿರುವ ಘಟನೆ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಉತ್ತರ ಪ್ರದೇಶ ಮೂಲದ ಆಸೀಫ್ ಎಂಬುವವರು ರೈಲಿನಲ್ಲಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಗರಕ್ಕೆ ಬಂದಿದ್ದಾರೆ.ಜೆಪಿನಗರಕ್ಕೆ ಹೋಗಲು ಮೆಜೆಸ್ಟಿಕ್‌ನಲ್ಲಿ ಆಸೀಫ್ ಆಟೋ ಹತ್ತಿದ್ದಾರೆ.
ಚಾಲಕ ಅವರನ್ನು ಶೇಷಾದ್ರಿಪುರಂನ ಪ್ಲಾಟ್‌ಫಾರಂ ರಸ್ತೆಯ ನಿರ್ಜನ ಪ್ರದೇಶದ ಬಳಿ ಕರೆದುಕೊಂಡು ಬಂದು ಪ್ರಯಾಣಿಕನಿಗೆ ಬೆದರಿಸಿ ಅವರ ಬಳಿ ಇದ್ದ 2 ಸಾವಿರ ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿ, ಪ್ರಯಾಣಿಕನನ್ನು ಆಟೋದಿಂದ ಇಳಿಸಿ ಪರಾರಿಯಾಗಿದ್ದಾನೆ. ಮುಂದೇನು ಮಾಡುವುದೆಂದು ತೋಚದೆ ಆಸೀಫ್ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೇರಾಗಳನ್ನು ಪರಿಶೀಲಿಸಿ ಆಟೋ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ