ಬೆಂಗಳೂರು,ಡಿ.20- ಇಯರ್ ಎಂಡ್ ಸೆಲೆಬ್ರೇಷನ್ ಸಂದರ್ಭದಲ್ಲೇ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.29ರಿಂದ ಆಟೋ ಚಾಲಕರು ಆಟೋ ಬಂದ್ ನಡೆಸಲು ತೀರ್ಮಾನಿಸಿದ್ದಾರೆ.
ರ್ಯಾಪಿಡ್ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು, ಬೌನ್ಸ್ ಎಲೆಕ್ಟ್ರೀಕ್ ಬೈಕ್ಗೆ ನೀಡಿರುವ ಅನುಮತಿ ರದ್ದುಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರ ಈ ಕೂಡಲೇ ಈಡೇರಿಸಬೇಕು ಎಂದು ಆಟೋ ಚಾಲಕರು ಪಟ್ಟು ಹಿಡಿದಿದ್ದಾರೆ.
ಈ ಆಟೋ ಮುಷ್ಕರಕ್ಕೆ 21 ಸಂಘಟನೆಗಳು ಬೆಂಬಲ ನೀಡಿದ್ದು, 29 ರಂದು ಬೆಳಿಗ್ಗೆ 10 ಗಂಟೆಗೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ ನಿಂದ ಬೃಹತ್ ಆಟೋ ರ್ಯಾಲಿ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.
ರೈಲ್ವೆದಲ್ಲಿ ಉದ್ಯೋಗದ ಕೊಡಿಸುವುದಾಗಿ 28 ಮಂದಿಗೆ 2.67 ಕೋಟಿ ಪಂಗನಾಮ
ರಾಜಧಾನಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರಿದ್ದು, ಎಲ್ಲ ಚಾಲಕರು ಮುಷ್ಕರಕ್ಕೆ ಬೆಂಬಲ ನೀಡಿರುವುದರಿಂದ ಪ್ರತಿಭಟನೆ ಉಗ್ರ ಸ್ವರೂಪ ತಾಳುವ ಸಾಧ್ಯತೆಗಳಿವೆ. ನಗರದಲ್ಲಿ ದಿನೇ ದಿನೇ ರ್ಯಾಪಿಡ್ ಬೈಕ್ ಟ್ಯಾಕ್ಸಿ ಸಂಖ್ಯೆಗಳ ಏರಿಕೆಯಾಗುತ್ತಿದ್ದು, ಇದರಿಂದ ಆಟೋ ಚಾಲಕರು ಬೀದಿಗೆ ಬೀಳುವ ಸಾಧ್ಯತೆ ಇರುವುದರಿಂದ ರ್ಯಾಪಿಡ್ ಬೈಕ್ ಟ್ಯಾಕ್ಸಿ ಸೇವೆ ರದ್ದುಪಡಿಸಬೇಕು ಎಂದು ಆಟೋ ಚಾಲಕರು ಪಟ್ಟು ಹಿಡಿದಿದ್ದಾರೆ.
ಬಿ.ಎಲ್.ಸಂತೋಷ್ ವಿರುದ್ಧ ರೊಚ್ಚಿಗೆದ್ದ ಹೆಚ್.ಡಿ.ಕುಮಾರಸ್ವಾಮಿ
ಅನುಮತಿ ಇಲ್ಲದಿದ್ದರೂ ರ್ಯಾಪಿಡ್ ಬೈಕ್ ಸೇವೆ ಎಲ್ಲೆಡೆ ಲಭ್ಯವಿದ್ದರೂ ಆರ್ಟಿಒ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಇದರ ಜೊತೆಗೆ ಬೌನ್ಸ್ ಕಂಪನಿಯವರು ಮೊದಲ ಹಂತದಲ್ಲಿ 100 ಇ-ಬೈಕ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದ್ದಾರೆ. ಇದಕ್ಕೆ ಸಾರಿಗೆ ಪ್ರಾದಿಕಾರ ಅನುಮತಿ ನೀಡಿರುವುದು ಆಟೋ ಚಾಲಕರನ್ನು ಕೆರಳಿಸಿದೆ.
ಹೀಗಾಗಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಯರ್ ಎಂಡ್ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಆಟೋ ಸಂಘಟನೆಗಳು ತೀರ್ಮಾನಿಸಿವೆ.
#Bengaluru, #AutoDrivers, #strike, #AutoStrike,