ಟೀ ಅಂಗಡಿಗೆ ನುಗ್ಗಿ ಹಲ್ಲೆ ಮಾಡಿದ್ದ ನಾಲ್ವರು ಪುಂಡರು ಅಂದರ್

Social Share

ಬೆಂಗಳೂರು, ಡಿ.10- ಟೀ ಅಂಗಡಿಗೆ ನುಗ್ಗಿ ಅಂಗಡಿಯಲ್ಲಿದ್ದವರ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಹೆಚ್‍ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ, ಕಾರ್ತಿಕ್, ಸಲ್ಮಾನ್ ಮತ್ತು ಕಾರ್ತಿಕ್ ಎನ್. ಬಂಧಿತ ಆರೋಪಿಗಳು.

ಬಂಧಿತರ ಪೈಕಿ ಮಂಜುನಾಥ ಅದೇ ಏರಿಯಾದಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದು , ಸಮೀಪದಲ್ಲಿನ ಬೇಕರಿಯಲ್ಲಿ ಚೆನ್ನಾಗಿ ವ್ಯಾಪಾರವಾಗುತ್ತಿದ್ದರಿಂದ ಆತನ ಮೇಲೆ ದ್ವೇಷ ಸಾಧಿಸುತ್ತಿದ್ದನು.

ರೌಡಿ ಕಾರಿನ ಮೇಲೆ ಗುಂಡಿನ ಸುರುಮಳೆಗೈದಿದ್ದ ಮೂವರ ಬಂಧನ

ಈ ಜಿದ್ದಿನಿಂದ ಡಿ. 8ರಂದು ರಾತ್ರಿ ಬೇಕರಿಗೆ ಬೇಕರಿಯಲ್ಲಿದ್ದವರಿಗೆ ಹಲ್ಲೆ ಮಾಡಿ ದರೋಡೆ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹೆಚ್ ಎ ಎಲ್ ಠಾಣೆ ಪೊಲೀಸರು ಆರೋಪಿಗಳ ಪತ್ತೆಗಾಗಿ ತಂಡವನ್ನು ರಚಿಸಿದ್ದರು.

ವೇಗದ ದ್ವಿಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಇಶಾನ್ ಕಿಶನ್

ಈ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದೆ.

Bengaluru, bakery, robbed, four arrested,

Articles You Might Like

Share This Article