Friday, May 3, 2024
Homeರಾಜ್ಯಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ : ಡಿಸಿಎಂ

ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ : ಡಿಸಿಎಂ


ಬೆಂಗಳೂರು,ಡಿ.1- ನಗರದ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಹಾಕಿರುವುದನ್ನು ನಿರ್ಲಕ್ಷಿಸದೆ ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟತ್ತು ಕಡೆ ಹುಸಿ ಬಾಂಬ್ ಬೆದರಿಕೆ ಹಾಕಿ, ಒಂದು ಕಡೆ ಟಾರ್ಗೆಟ್ ಮಾಡುವ ಸಾಧ್ಯತೆ ಇರುವುದರಿಂದ ಇಂಥ ಬೆದರಿಕೆಯನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದರು.

ನಾನು ಮನೆಯಲ್ಲಿ ಬೆಳಗ್ಗೆ ವ್ಯಾಯಾಮ ಮಾಡುತ್ತಿದ್ದಾಗ ಸುದ್ದಿ ತಿಳಿದು ಗಾಬರಿಯಾದೆ. ತಕ್ಷಣ ಪರಿಚಯಸ್ಥರು ಮತ್ತು ಇತರೆ ಶಾಲೆಗಳಿಗೆ ಬೆದರಿಕೆ ಬಂದಿರುವ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ಇಮೇಲ್ ಮೂಲಕ ಮಾಹಿತಿ ಬಂದಿರುವುದು ಗೊತ್ತಾಗಿದೆ ಎಂದು ಹೇಳಿದರು.

ಇದು ಮೇಲ್ನೋಟಕ್ಕೆ ಹುಸಿ ಬೆದರಿಕೆಯಾಗಿದ್ದರೂ ನಾವು ನಿರ್ಲಕ್ಷ್ಯ ಮಾಡಲು ಆಗುವುದಿಲ್ಲ. ಒಮ್ಮೆ ಗಂಭೀರ ಪ್ರಯತ್ನವನ್ನು ಮಾಡುತ್ತಾರೆ. ಪೆÇಲೀಸರು ಎಲ್ಲಾ ಪರಿಶೀಲನೆ ನಡೆಸಿದ್ದು, ಬೆದರಿಕೆ ಹಾಕಿದವರನ್ನು ಪತ್ತೆಹಚ್ಚುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಪರಮೇಶ್ವರ್

ತಕ್ಷಣ ಎಲ್ಲಾ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸುತ್ತಿದ್ದು, ಈವರೆಗೂ ಯಾವುದೇ ರೀತಿಯ ಸ್ಪೋಟಕ ವಸ್ತು ಪತ್ತೆಯಾಗಿಲ್ಲ ಎಂದು ಹೇಳಿದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ರೀತಿಯ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ. ಕೆಲ ಕಿಡಿಕೇಡಿಗಳಿಂದ ಇಂತಹ ಕೃತ್ಯಗಳು ನಡೆಯುತ್ತವೆ. ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು. ಬೆಂಗಳೂರು ಹಬ್ಬದ ವೇಳೆ ಬೆದರಿಕೆ ಹಾಕಲಾಗಿದ್ದು, ಹಬ್ಬ ಮಾಡುವವರು ಮಾಡಬೇಕು, ಆದರೂ ಈ ವಿಚಾರವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಮುನ್ನಚ್ಚರಿಕೆ ವಹಿಸಬೇಕು ಎಂದು ಹೇಳಿದರು.

RELATED ARTICLES

Latest News