Sunday, November 9, 2025
Homeರಾಜ್ಯಬಂಧಿಖಾನೆಗಳಲ್ಲಿ ರಾಜಾತಿಥ್ಯ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಬಂಧಿಖಾನೆಗಳಲ್ಲಿ ರಾಜಾತಿಥ್ಯ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.9- ಬಂಧಿಖಾನೆಗಳಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿರುವ ಪ್ರಕರಣಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿಖಾನೆಯಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿರುವ ಸಂಬಂಧಪಟ್ಟಂತೆ ಚರ್ಚಿಸಲು ನಾಳೆ ಗೃಹ ಸಚಿವರು ಪ್ರತ್ಯೇಕ ಸಭೆ ನಡೆಸಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ತಮ ಸರ್ಕಾರ ಯಾವುದೇ ಒಂದು ಸಂಘಟನೆಗೆ ಸೀಮಿತವಾಗಿ ಸರ್ಕಾರಿ ಸ್ವತ್ತುಗಳಲ್ಲಿ ಚಟುವಟಿಕೆಗಳನ್ನು ನಿಷೇಧಿಸಿಲ್ಲ. ಆದರೆ ಆರ್‌ಎಸ್‌‍ಎಸ್‌‍ನವರು ತಮಗಾಗಿಯೇ ಈ ಆದೇಶ ಹೊರಡಿಸಲಾಗಿದೆ ಎಂದು ಭಾವಿಸಿಕೊಂಡಿದ್ದಾರೆ. ಯಾವುದೇ ಸಂಘಟನೆಗಳಾದರೂ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಚಟುವಟಿಕೆ ನಡೆಸಬೇಕು. ಅರ್‌ಎಸ್‌‍ಎಸ್‌‍ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಕ್ಕೆಲ್ಲಾ ಉತ್ತರ ಕೊಡಲು ಸಾಧ್ಯವಿಲ್ಲ ಎಂದರು.

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಪ್ರಕರಣ ನ್ಯಾಯಾಲಯದಲ್ಲಿದ್ದು, ಅಲ್ಲಿಂದ ಆದೇಶ ಬಂದ ತಕ್ಷಣವೇ ಚುನಾವಣೆ ನಡೆಸುತ್ತೇವೆ ಎಂದರು.
ಕಬ್ಬಿಗೆ ಬೆಲೆ ನಿಗದಿ ಸಂಬಂಧಪಟ್ಟಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಮುಖದಲ್ಲೇ ಸಭೆ ನಡೆಸಿ, ನಿರ್ಧರಿಸಲಾಗಿದೆ. ಎಲ್ಲರೂ ಒಪ್ಪಿಕೊಂಡಿದ್ದಾರೆೆ. ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿದಂತೆ ಎಲ್ಲರೂ ಹೆಚ್ಚುವರಿಯಾದ 50 ರೂ. ಕೊಡುತ್ತಾರೆ. ಕೊಡುವುದಿಲ್ಲ ಎಂದು ಹೇಳುತ್ತಿರುವವರು ಕೂಡ ಹಣ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಒಂದು ವೇಳೆ ಹಣ ಕೊಡುವುದಿಲ್ಲ ಎಂದಾದರೆ ಯತ್ನಾಳ್‌ ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು. ನೆರೆ ಹಾವಳಿಯಿಂದ ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್‌ ಪ್ರದೇಶ ಹಾನಿಯಾಗಿದೆ. ಅದಕ್ಕೆಲ್ಲಾ ಪರಿಹಾರ ಪಾವತಿಸಲಾಗುವುದು ಎಂದರು. ವಾಲೀಕಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಸಂಪುಟ ಪುನರ್‌ರಚನೆಯ ವೇಳೆಯಲ್ಲಿ ಪರಿಗಣಿಸುವುದಾಗಿ ತಿಳಿಸಿದರು. ಮೆಕ್ಕೆ ಜೋಳಕ್ಕೆ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಎಲ್ಲದಕ್ಕೂ ನಮನ್ನೇ ಪ್ರಶ್ನೆ ಮಾಡಿದರೆ ಹೇಗೆ ಎಂದು ಕೇಳಿದರು.

RELATED ARTICLES

Latest News