ಚಾಮರಾಜಪೇಟೆ ಮೈದಾನದಲ್ಲಿ ಅದ್ಧೂರಿ ಗಣೇಶೋತ್ಸವಕ್ಕೆ ಸಿದ್ಧತೆ

Social Share

ಬೆಂಗಳೂರು,ಆ.20- ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಬಾರದು ಎಂದು ಪೆÇಲೀಸರು ಗುಪ್ತ ಸೂಚನೆ ನೀಡಿದ್ದರೂ ಈ ಬಾರಿ ಮೈದಾನದಲ್ಲಿ ಅದ್ದೂರಿ ಗಣೇಶೊತ್ಸವಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಇದೇ ಆ.31 ರಿಂದ ಸೆ.10ರವರೆಗೆ ಚಾಮರಾಜಪೇಟೆ ಮೈದಾನದಲ್ಲಿ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಸಹಯೋಗದೊಂದಿಗೆ ಅದ್ಧೂರಿ ಗಣೇಶೋತ್ಸವ ಆಚರಿಸಲಾಗುವುದು ಎಂದು ಚಾಮರಾಜಪೇಟೆ ಗಣೇಶೋತ್ಸವ ಸಮಿತಿ ಘೋಷಿಸಿದೆ.

ಈ ಕುರಿತಂತೆ ಈಗಾಗಲೇ ಭರ್ಜರಿ ಪೋಸ್ಟರ್ ರಿಲೀಸ್ ಮಾಡಿರುವ ಸಮಿತಿಯವರು ಆ.31ರಂದು ಬೆಳಿಗ್ಗೆ 9 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ತಿಳಿಸಿದೆ. ಗಣೇಶ ಪ್ರತಿಷ್ಠಾಪನೆ ನಂತರ ಹತ್ತು ದಿನಗಳ ಕಾಲ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಸೆ.10 ರಂದು ಚಾಮರಾಜಪೇಟೆಯ ಗಲ್ಲಿಗಲ್ಲಿಗಳಲ್ಲಿ ಗಣೇಶೋತ್ಸವ ಮೆರವಣೆಗೆ ನಡೆಸಲು ತೀರ್ಮಾನಿಸಲಾಗಿದೆ.

ಈದ್ಗಾ ಮೈದಾನ ಎಂದೇ ಚಿರಪರಿಚಿತವಾಗಿದ್ದ ಚಾಮರಾಜಪೇಟೆ ಆಟದ ಮೈದಾನವನ್ನು ಪೋಸ್ಟರ್‍ನಲ್ಲಿ ಜಯಚಾಮರಾಜೇಂದ್ರ ಒಡೆಯರ್ ಆಟದ ಮೈದಾನವೆಂದೂ ಉಲ್ಲೇಖಿಸಲಾಗಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೇ, ಬೇಡವೇ ಎಂದು ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸರು ಸಭೆ ನಡೆಸುತ್ತಿದ್ದಾರೆ. ಅವರ ತೀರ್ಮಾನ ಹೊರಬೀಳುವ ಮುನ್ನವೇ ಗಣೇಶೋತ್ಸವ ಆಚರಣೆಗೆ ಮುಂದಾಗಿರುವುದು ಸೋಜಿಗವೆನಿಸಿದೆ.

ಒಡಕು: ಗಣೇಶೋತ್ಸವ ಆಚರಣೆ ಕುರಿತಂತೆ ಕೈಗೊಂಡಿರುವ ತೀರ್ಮಾನಕ್ಕೆ ಚಾಮರಾಜಪೇಟೆ ನಾಗರಿಕರ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಗಣೇಶೋತ್ಸವ ಆಚರಣೆ ಕುರಿತಂತೆ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುಕ್ಮಾಂಗದ ಏಕಾಏಕಿ ತೀರ್ಮಾನ ಕೈಗೊಂಡಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ರಾಮೇಗೌಡ ಹಾಗೂ ಕೆಲ ಸದಸ್ಯರು ಆರೋಪಿಸಿದ್ದಾರೆ.

ಗಣೇಶೋತ್ಸವಕ್ಕೆ ಯಾರದೇ ವಿರೋಧ ಇಲ್ಲ. ಆದರೆ, ರಾಮೇಗೌಡರು ಶಾಸಕ ಜಮೀರ್ ಆಹ್ಮದ್‍ಖಾನ್ ಅವರೊಂದಿಗೆ ಷಾಮಿಲ್ಲಾಗಿ ವಿನಾಕಾರಣ ಹೇಳಿಕೆ ನೀಡುತ್ತಿದ್ದಾರೆ ಎಂದು ರುಕ್ಮಾಂಗದ ಕಿಡಿ ಕಾರಿದ್ದಾರೆ.

ಜಯ ಚಾಮರಾಜೇಂದ್ರ ಒಡೆಯರ್ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಬೆಂಗಳೂರು ಗಣೇಶೋತ್ಸವ ಸಮಿತಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದೆ. ಆದರೆ, ಕೆಲವರು ವಿವಾದ ಸೃಷ್ಟಿಸಲು ಹವಣಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ತಿರುಗೇಟು: ರುಕ್ಮಾಂಗದ ಹೇಳಿಕೆಗೆ ತಿರುಗೇಟು ನೀಡಿರುವ ರಾಮೇಗೌಡರು ನಾನು ಶಾಸಕರ ಜೊತೆ ಸೇರಿಲ್ಲ. ಅವರೇ ಪಿತೂರಿ ನಡೆಸುತ್ತಿದ್ದಾರೆ. ಇದರಲ್ಲಿ ಬಿಜೆಪಿ ಕೈವಾಡ ಇರಬಹುದು ಎಂಬ ಶಂಕೆ ಇದೆ ಎಂದಿದ್ದಾರೆ. ಗಣೇಶೋತ್ಸವ ಆಚರಿಸಲು ನಾವು ಬೆಂಗಳೂರು ಗಣೇಶೋತ್ಸವ ಸಮಿತಿ ಜೊತೆ ನಾವು ಸೇರುವುದಿಲ್ಲ. ಅವರೇ ಬೇಕಾದರೆ ನಮ್ಮೊಂದಿಗೆ ಬರಲಿ ಎಂದು ಸಲಹೆ ನೀಡಿದ್ದಾರೆ.

Articles You Might Like

Share This Article