ನಿರಂತರ ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ

ಬೆಂಗಳೂರು,ಅ. 21-ನಿನ್ನೆ ರಾತ್ರಿಯಿಂದ ಬೆಳಿಗ್ಗೆವರೆಗೆ ನಿರಂತರವಾಗಿ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಇಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ,ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ರವರು ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್‌ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಕಾಲೇಜುಗಳಲ್ಲಿ … Continue reading ನಿರಂತರ ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ