Saturday, July 5, 2025
Homeಬೆಂಗಳೂರುಬೆಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಡೆಲಿವರಿ ಬಾಯ್ ಸಾವು

ಬೆಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಡೆಲಿವರಿ ಬಾಯ್ ಸಾವು

Bengaluru: Delivery boy dies after being hit by KSRTC bus

ಬೆಂಗಳೂರು, ಜು.5-ಕೆಎಸ್‌ಆರ್‌ಟಿಸಿ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನೀಲಸಂದ್ರದ ನಿವಾಸಿ ಮಹಮ್ಮದ್ ಅಜರ್ ಪಾಷಾ (19) ಮೃತಪಟ್ಟ ಪ್ಲಿಪ್‌ಕಾರ್ಟ್ ಡೆಲಿವರಿ ಬಾಯ್..ಇಂದು ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ಮಹಮ್ಮದ್ ಅಜರ್ ಪಾಷಾ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಜಿ ರಸ್ತೆಯ ಮೈಸೂರು ಬ್ಯಾಂಕ್ ಜಂಕ್ಷನ್ ಬಳಿ ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಮಹಮ್ಮದ್ ಗಂಭೀರ ಗಾಯಗೊಂಡರು. ಚಾಲಕ ತಕ್ಷಣ ಸ್ಥಳದಲ್ಲಿ ಬಸ್ ನಿಲ್ಲಿಸಿದ್ದಾರೆ.

ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಸುದ್ದಿ ತಿಳಿದು ಉಪ್ಪಾರಪೇಟೆ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

RELATED ARTICLES

Latest News