ಬೆಂಗಳೂರು, ನ.16- ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಂಗಳೂರು-ಬೆಳಗಾವಿ ನಡುವೆ ಸಂಚರಿಸಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆದು ಬೆಂಗಳೂರು-ಧಾರಾವಾಡ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲನ್ನು ಬೆಳಗಾವಿಯವರೆಗೂ ವಿಸ್ತರಿಸಲು ಮನವಿ ಮಾಡಿದ್ದರು, ಇದನ್ನು ಪರಿಣಿಸಿ ಬೆಂಗಳೂರು-ಧಾರಾವಾಡ ಮೂಲಕ ಬೆಳಗಾವಿಗೆ ರೈಲು ಸಂಚಾರ ನಡೆಸಲಿದೆ.
ರೈಲು ಸಂಖ್ಯೆ 20661 ಬೆಂಗಳೂರು ನಿಲ್ದಾಣದಿಂದ ಬೆಳಗ್ಗೆ 5.45ಕ್ಕೆ ಹೊರಟು ಮಧ್ಯಾಹ್ನ 1.30ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 20662ಬೆಳಗಾವಿಯಿಂದ ಮಧ್ಯಾಹ್ನ 2ಕ್ಕೆ ಹೊರಟು ರಾತ್ರಿ 10.10ಕ್ಕೆ ಬೆಂಗಳೂರು ತಲುಪಲಿದೆ.
ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕಲೆಕ್ಷನ್ ಪ್ರಿನ್ಸ್ ಮಗ : ಹೆಚ್‌ಡಿಕೆ ಟೀಕೆ
ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಯಾವ ದಿನಾಂಕದಿಂದ ಸಂಚಾರ ವಿಸ್ತರಣೆಯಾಗಲಿದೆಯೆಂದು ತಿಳಿಸಿಲ್ಲವಾದರೂ ಅತಿ ಶೀಘ್ರದಲ್ಲೇ ಪ್ರಯಾಣಿಕರಿಗೆ ಇದರ ಉಪಯೋಗವಾಗಲಿದೆ. ಮನವಿಯನ್ನು ಪುರಷ್ಕರಿಸಿದ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಸಂಸದ ಈರಣ್ಣ ಕಡಾಡಿ ಅಭಿನಂದನೆ ಸಲ್ಲಿಸಿದ್ದಾರೆ.