ಬೆಂಗಳೂರು, ಫೆ, 17- ನಗರದ 50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ನೆರವಾಗುವ 5550 ಕೋಟಿ ರೂ. ವೆಚ್ಚದ 775 ಎಂಎಲ್‍ಡಿ ಸಾಮಥ್ರ್ಯದ ಎಲ್ಲಾ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಬಜೆಟ್‍ನಲ್ಲಿ ತಿಳಿಸಿದ್ದಾರೆ.
ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಎರಡನೆ ಹಂತದ ಯೋಜನೆ ಅನುಷ್ಠಾನಗೊಳಿಸಲು ಜಲಮಂಡಳಿಗೆ 200 ಕೋಟಿ ರೂ.ಗಳ ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿದೆ.
ಬಜೆಟ್ ಹೈಲೈಟ್ಸ್ : 116 ನೂತನ ಪೊಲೀಸ್ ಠಾಣೆ ನಿರ್ಮಾಣ
1200 ಕೋಟಿ ರೂ.ವೆಚ್ಚದಲ್ಲಿ ಮೆಗಾಸಿಟಿ ರಿವಾಲ್ವಿಂಗ್ ನಿಯಡಿ ದಿನಂಪ್ರತಿ 440 ದಶಲಕ್ಷ ಲೀಟರ್ ತ್ಯಾಜ್ಯ ನೀರು ಸಂಸ್ಕರಣಾ ಸಾಮಥ್ರ್ಯದ 4 ಹೊಸ ಘಟಕಗಳ ಸ್ಥಾಪನೆಗೆ 1200 ಕೋಟಿ ರೂ.ನಿಗದಿಪಡಿಸಲಾಗಿದೆ.
ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ಹೊಸ ವಿನ್ಯಾಸದ ಆಟೋ, ಟಿಪ್ಪರ್‍ಗಳು ಹಾಗೂ ಕಾಂಪ್ಯಕ್ಟರ್‍ಗಳು ಕಾರ್ಯಾಚರಣೆ ಮಾಡಲಿದ್ದು, ಪ್ರತಿ ವಾರ್ಡ್‍ಗೆ ಒಂದರಂತೆ ಆಧುನಿಕ ತಂತ್ರಜ್ಞಾನ ಆಧಾರಿತ ವಾಸನೆ ರಹಿತ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.
ಬೊಮ್ಮಾಯಿ ಬಜೆಟ್ – 2023-2024 (Live Updates)
ವಾಣಿಜ್ಯ ಮಳಿಗೆಗಳು, ಆಸ್ಪತ್ರೆಗಳು, ಹೋಟೆಲ್‍ಗಳು ಸೇರಿದಂತೆ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮ ಹಂತದಲ್ಲಿಯೇ ತ್ಯಾಜ್ಯವನ್ನು ಸಂಸ್ಕರಿಸುವುದನ್ನು ಕಡ್ಡಾಯಗೊಳಿಸುವ ಮೂಲಕ ಸ್ಥಳೀಯ ತ್ಯಾಜ್ಯ ಸಂಸ್ಕರಣೆಗೆ ಒತ್ತು ನೀಡಲಾಗಿದೆ.
ಮಳೆಗಾಲದ ಪ್ರವಾಹ ಪರಿಸ್ಥಿತಿ ಕಡಿಮೆ ಮಾಡುವ ಉದ್ದೇಶದಿಂದ 3 ಸಾವಿರ ಕೋಟಿ ರೂ.ವೆಚ್ಚದಲ್ಲಿ ಎಲ್ಲಾ ಕೆರೆಗಳಿಗೆ ಸ್ಲೈಸ್ ಗೇಟ್‍ಗಳನ್ನು ಅಳವಡಿಸಲಾಗುವುದು ಇದರಿಂದ ನೀರಿನ ಹರಿವಿನ ವೇಗ ಮತ್ತು ಪ್ರಮಾಣ ನಿಯಂತ್ರಿಸಲು ಸಾಧ್ಯವಿದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.
ಬೊಮ್ಮಾಯಿ ಬಜೆಟ್ – 2023-2024 (Live Updates)
ನಗರದ ಸಾರಿಗೆ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಹಲವಾರು ಸಂಸ್ಥೆಗಳ ಕಾರ್ಯಾಚರಣೆಯನ್ನು ಸಮನ್ವಯಗೊಳಿಸುವ ಉದ್ದೇಶದಿಂದ ಉನ್ನತಾಕಾರದ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಕಾರ ರಚನೆ ಮಾಡುವ ತೀರ್ಮಾನವನ್ನು ಸಿಎಂ ಕೈಗೊಂಡಿದ್ದಾರೆ.
#BasavarajBommai, #Budget2023, #StateBudget2023, #BommaiBudget, #ಬಜೆಟ್, #ಬಜೆಟ್2023,