Friday, May 17, 2024
Homeರಾಜ್ಯಪಟಾಕಿ ದುರಂತ : ತಹಸೀಲ್ದಾರ್, ಇನ್‌ಸ್ಪೆಕ್ಟರ್‌ ಸೇರಿ ಮೂವರು ಅಮಾನತು

ಪಟಾಕಿ ದುರಂತ : ತಹಸೀಲ್ದಾರ್, ಇನ್‌ಸ್ಪೆಕ್ಟರ್‌ ಸೇರಿ ಮೂವರು ಅಮಾನತು

ಬೆಂಗಳೂರು,ಅ.10-ಅತ್ತಿಬೆಲೆ ಪಟಾಕಿ ದುರಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧ ತಹಸೀಲ್ದಾರ್, ಇನ್ಸ್‍ಪೆಕ್ಟರ್ ಮತ್ತು ರೀಸನಲ್ ಫೈಯರ್ ಆಫೀಸರ್ ಅವರ ಅಮಾನತಿಗೆ ಸೂಚನೆ ನೀಡಿದ್ದಾರೆ.

ಪಟಾಕಿ ದುರಂತ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಾದ್ಯಂತ ಪ್ರತಿಯೊಂದು ಪಟಾಕಿ ಪರವಾನಗಿದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್ ಇನ್ಸ್‍ಪೆಕ್ಟರ್ ವರದಿ, ಛಾಯಾಚಿತ್ರಗಳೊಂದಿಗೆ ಚೆಕ್‍ಬಂಧಿ ನಿಗದಿ ಮಾಡಿ ವರದಿ ಸಲ್ಲಿಸಲಾಗಿದೆ.

ಪೊಲೀಸ್ ಅೀಧಿಕ್ಷಕರು ಜಿಲ್ಲಾಧಿಕಾರಿಗಳಿಗೆ ಘಟನೆ ಸಂಬಂಧ ವರದಿ ಸಲ್ಲಿಸಿದ್ದಾರೆ. ಅದರ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಹಸೀಲ್ದಾರ್‍ ರಿಂದಲೂ ವರದಿ ಪಡೆದಿದ್ದಾರೆ ಎಂದು ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದರು.

ಎಕ್ಸ್‍ಫ್ಲೋಸೀವ್ ಆಕ್ಟ್‌ನಲ್ಲಿ ಲೈಸೆನ್ಸ್ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. 14 ಜನರ ಜೀವಕ್ಕೆ ಹೊಣೆ ಯಾರು. ಕಾಯ್ದೆಯಲ್ಲಿರುವ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಸಲ್ಲಿಸಿದ ವರದಿ ಸರಿ ಇದೆಯೇ ಎಂಬುದನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಬೇಕೆಂದು ತಾಕೀತು ಮಾಡಿದರು.

ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸೆನ್ಸ್ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡನ್‍ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಸಭೆಯ ಗಮನಕ್ಕೆ ತರಲಾಯಿತು.

ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ

ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ ಸುರಕ್ಷತಾ ಕ್ರಮ ಕೈಗೊಳ್ಳದ ಗೋಡನ್ ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳುವುದಲ್ಲದೆ, ಅವುಗಳ ಪರವಾನಗಿಗಳನ್ನು ರದ್ದುಗೊಳಿಸಬೇಕೆಂದು ಸೂಚಿಸಿದರು.
ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ನಿರಪೇಕ್ಷಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ.

5 ವರ್ಷಕ್ಕೊಮ್ಮೆ ನವೀಕರಣಕ್ಕೆ ನಿರಪೇಕ್ಷಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಪೋಟಕದ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಗಳ ತಿದ್ದುಪಡಿ ಅಗತ್ಯವಿದೆ ಎಂದ ಅವರು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿದರು. ರಾಜ್ಯಕ್ಕೆ ಅನ್ವಯಿಸುವ ನಿಯಮ ಬದಲಿಸಲು ಸೂಚನೆ ನೀಡಿದರು.
ಅತ್ತಿಬೆಲೆಯಲ್ಲಿ ನಿಗದಿಯಾದ ಮಾನದಂಡ ಪೂರೈಸದಿದ್ದರೂ ತಪಾಸಣಾ ವರದಿ ನೀಡಿ, ಶಿಫಾರಸ್ಸು ಮಾಡಿದ ಸರ್ಕಲ್ ಇನ್ಸ್‍ಪೆಕ್ಟರ್, ತಹಸೀಲ್ದಾರ್, ಪ್ರಾದೇಶಿಕ ಅಗ್ನಿಶಾಮಕ ಅಕಾರಿಗಳನ್ನು ಅಮಾನತು ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಅತ್ತಿಬೆಲೆ ಹೊಸೂರು ಗಡಿಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕೆಂದು ಹೇಳಿದ ಅವರು, ಈ ಕುರಿತು ನ್ಯಾಯಾಲಯಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಮಾರಾಟವನ್ನು ಖಾತರಿಪಡಿಸಿಕೊಳ್ಳಬೇಕೆಂದು ಹೇಳಿದರು.

ಸಭೆಯಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜಕೀಯ ಸಮಾವೇಶ ಹಾಗೂ ವಿವಾಹ ಸಂದರ್ಭಗಳಲ್ಲಿ ಸುರಕ್ಷಿತ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ಮಾಡಿದರು.

ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..?

ಸಭೆಯಲ್ಲಿ ಮುಖ್ಯಕಾರ್ಯದರ್ಶಿ ವಂದಿತಾಶರ್ಮಾ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸಿಎಂ ಅವರ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಘೋಯೆಲ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಕಾರಿ ಕೆ.ಎ.ದಯಾನಂದ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News