ಬೆಂಗಳೂರು,ಫೆ.17- ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆ ಸುಧಾರಿಸುವ ಉದ್ದೇಶದಿಂದ ಬೆಂಗಳೂರು ಹೆಲ್ತ್ ಸಿಸ್ಟಮ್ ಎಂಬ ವಿನೂತನ ಯೋಜನೆ ಜಾರಿಗೆ ಈ ಬಾರಿ ಬಜೆಟ್‍ನಲ್ಲಿ ಮುನ್ನುಡಿ ಬರೆಯಲಾಗಿದೆ.
ನಗರದ ನಾಗರಿಕರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ದೊರಕಿಸಿಕೊಡಬೇಕು ಎನ್ನುವುದು ನಮ್ಮ ಸರ್ಕಾರದ ಆಧ್ಯತೆಯಾಗಿದ್ದು, ಹೀಗಾಗಿ ಎಲ್ಲ ಆಸ್ಪತ್ರೆಗಳ ನಡುವೆ ಸಮನ್ವಯ ಸಾಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಹೆಲ್ತ್ ಸಿಸ್ಟಮ್ ಯೋಜನೆ ಜಾರಿಗೊಳಿಸಲು ತೀರ್ಮಾನಿಸಲಾಗಿದ ಎಂದು ಅವರು ಮಾಹಿತಿ ನೀಡಿದ್ದಾರೆ.
2022-23ನೇ ಸಾಲಿನಲ್ಲಿ 243 ವಾರ್ಡ್‍ಗಳಲ್ಲಿ ನಮ್ಮ ಕ್ಲಿನಿಕ್‍ಗಳು ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್‍ಗಳನ್ನು ಅನುಮೋದಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ 50 ಡಯಾಲಿಸಿಸ್ ಹಾಸಿಗೆಗಳು ಮತ್ತು 300 ಹಾಸಿಗೆಗಳ ಸಾಮಥ್ರ್ಯದ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
20 ಬೆಂಗಳೂರು ಪಬ್ಲಿಕ್ ಶಾಲೆಗಳ ಜತೆಗೆ ಅಮೃತ ನಗರೋತ್ಥಾನ ಯೋಜನೆಯಡಿ ಬಿಬಿಎಂಪಿ ಶಾಲೆಗಳ ಸಮಗ್ರ ಅಭಿವೃದ್ದಿಗಾಗಿ 180 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ.
ಕಳೆದ ಸಾಲಿನಲ್ಲಿ 10 ಲಕ್ಷ ಸಸಿ ನೆಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 15 ಲಕ್ಷ ಸಸಿ ನೆಡಲು ಸಹಕಾರಿಯಾಗುವಂತೆ 3 ಹೊಸ ಹೈಟೆಕ್ ನರ್ಸರಿಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ
#BengaluruHealthSystem, #BasavarajBommai #Budget2023, #StateBudget2023, #BommaiBudget, #ಬಜೆಟ್ #ಬಜೆಟ್2023,