Sunday, September 8, 2024
Homeರಾಜ್ಯಇಂಜಿನಲ್ಲಿ ಬೆಂಕಿ : ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ

ಇಂಜಿನಲ್ಲಿ ಬೆಂಕಿ : ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ

ಬೆಂಗಳೂರು, ಮೇ 19- ಕೊಚ್ಚಿಗೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಇಂಜಿನ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ತಕ್ಷಣ ಸ್ಥಳಾಂತರಿಸಲಾಗಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ. ಮೂಲಗಳ ಪ್ರಕಾರ, ಟೇಕ್‌ ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಚ್ಚತ್ತ ವಿಮಾನದ ಸಿಬ್ಬಂದಿ ಸದಸ್ಯರು ಏರ್‌ ಟ್ರಾಫಿಕ್‌ ಕಂಟ್ರೋಲರ್‌ಗೆ ಎಚ್ಚರಿಕೆ ಸಂದೇಶ ನೀಡಿದ ಮಂತರ ಮತ್ತುಪ್ರಮಾಣದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ ವಕ್ತಾರರು ತಿಳಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಮತೆ ಕೂಡಲೇ ಬೆಂಕಿಯನ್ನು ನಂದಿಸಲಾಯಿತು ಎಂದು ಹೇಳಿದರು. ನಿನ್ನೆ ರಾತ್ರಿ11.30ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಕೊತ್ತು ಮೇಲೆ ಹಾರಿತ್ತು ಕೆಲವೇ ನಿಮಿಷದಲ್ಲಿ ಒಂದು ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಶುರುವಾಗಿದೆ ಕೂಡಲೆ ಹಿಂತಿರುಗಲು ಸೂಚಿಸಿ ಯಾವುದೇ ಅನಾಹುತ ಸಂಭವಿಸದೆ ವಿಮಾನ ಲ್ಯಾಂಡಿಂಗ್‌ ಆಗಿದೆ.

ಯಾವುದೇ ಅತಿಥಿಗಳಿಗೆ ಯಾವುದೇ ಗಾಯಗಳಿಲ್ಲ ,ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ ಮತ್ತು ನಮ್ಮ ಅತಿಥಿಗಳು ತಮ ಗಮ್ಯಸ್ಥಾನವನ್ನು ಆದಷ್ಟು ಬೇಗ ತಲುಪಲು ಪರ್ಯಾಯ ವ್ಯವಸ್ಥೆಗಳನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ ಎಂದು ಅದು ಹೇಳಿದೆ. ವಿಮಾನವನ್ನು ಸ್ಥಳಾಂತರಿಸಿ ,ಘಟನೆಗೆ ಕಾರಣ ತಿಳಿಯಲು ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ.

RELATED ARTICLES

Latest News