ಬೆಂಗಳೂರು,ಜ.13-ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಮಾಧ್ಯಮಗಳ ವರದಿಯನ್ನಾಧರಿಸಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್ ರಾಜ್ಯ ಸರ್ಕಾರ, ಬಿಎಂಆರ್ಸಿಎಲ್ ಹಾಗೂ ಬಿಬಿಎಂಪಿಯನ್ನು ಪ್ರತಿವಾದಿಯನ್ನಾಗಿಸಿಕೊಂಡಿದೆ.
ನಿರ್ಮಾಣ ಹಂತದ ಪಿಲ್ಲರ್ ಕುಸಿದು ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಮೆಟ್ರೋ ಮಾರ್ಗದ ರಸ್ತೆ ಗುಂಡಿ ಬಿದ್ದಿದೆ ಇಂತಹ ಘಟನೆಗಳು ರಸ್ತೆ ಸುರಕ್ಷತೆ ಬಗ್ಗೆ ಚಿಂತೆಗೀಡು ಮಾಡಿದೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್ .ಕಿಣಗಿಯವರಿದ್ದ ನ್ಯಾಯಪೀಠ ಕಳವಳ ವ್ಯಕ್ತಪಡಿಸಿದೆ.
ವಿಧಾನಸೌಧ ಎದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ
ಸಾರ್ವಜನಿಕ ಹಿತದೃಷ್ಟಿಯಿಂದ ಏನು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಟೆಂಡರ್ ದಾಖಲೆಗಳಲ್ಲಿ ಸುರಕ್ಷತಾ ಕ್ರಮ ಒಳಗೊಂಡಿದೆಯೇ. ಸ್ಥಳದ ಬಗ್ಗೆ ಅಕಾರಿಗಳು ಪರಿಶೀಲನ ನಡೆಸಿದ್ದಾರೆಯೇ, ಸರ್ಕಾರ ಸುರಕ್ಷತಾ ಕ್ರಮ ಸಂಬಂಧ ಆದೇಶ ಹೊರಡಿಸಿದಯೆ ಹಾಗೂ ಗುತ್ತಿಗೆದಾರರು, ಅಧಿಕಾರಿಗಳ ಮೇಲೆ ಹೂಣಿಗಾರಿಕೆ ನಿಗದಿಪಡಿಸಲಾಗಿದೆಯೇ ಎಂದು ನ್ಯಾಯಪೀಠ ಸರ್ಕಾರವನ್ನು ಪ್ರಶ್ನಿಸಿದೆ.
Bengaluru, Metro Pillar, Tragedy, High Court, Takes, Case,