ಬೆಂಗಳೂರು,ಜ.5- ಬಹುನಿರೀಕ್ಷಿತ ಬೆಂಗಳೂರು-ಮೈಸೂರು ನಡುವೆ ನಿರ್ಮಾಣ ವಾಗಿರುವ ದಶಪಥ ಎಕ್ಸ್ಪ್ರೆಸ್ ವೇಯನ್ನು ಮುಂದಿನ ತಿಂಗಳು ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ಭೂ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಹೆದ್ದಾರಿಯ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಮಾತನಾಡಿದ ಅವರು, ಬೆಂಗಳೂರು-ಮೈಸೂರು ನಡುವಿನ ಹೆದ್ದಾರಿಯನ್ನು ರಾಷ್ಟ್ರಪತಿ ಇಲ್ಲವೇ ಪ್ರಧಾನಿ ಅವರು ಉದ್ಘಾಟನೆ ಮಾಡಲಿದ್ದಾರೆ. ಶೀಘ್ರದಲ್ಲೇ ದಿನಾಂಕ ನಿಗದಿ ಮಾಡಲಾಗುವುದು ಎಂದರು.
ಬೆಂಗಳೂರು- ಮೈಸೂರು ನಡುವಿನ ಈ ಹೆದ್ದಾರಿಯಲ್ಲಿ ಕೇವಲ 1 ಗಂಟೆ 10 ನಿಮಿಷದಲ್ಲಿ ಸಂಚಾರ ಮಾಡಬಹುದು. ಇದರಿಂದ ಸಮಯ ಮತ್ತು ಮಾನವ ಶಕ್ತಿ ಉಳಿತಾಯವಾಗಲಿದೆ ಎಂದು ಅಭಿಪ್ರಾಯ ಪಟ್ಟರು. ಬೆಂಗಳೂರು ಸಂಚಾರ ದಟ್ಟಣೆ ನಿಭಾಯಿಸಲು ಸಬ್ಅರ್ಬನ್ ರಸ್ತೆ ನಿರ್ಮಿಸಿ ನಗರ ಹೊರ ವಲಯದ ಹೊಸಕೋಟೆ, ರಾಮನಗರ, ದೊಡ್ಡಬಳ್ಳಾಪುರ, ದೇವನಹಳ್ಳಿ, ಆನೇಕಲ್ಗೆ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಒತ್ತಡ ನಿಭಾಯಿಸಲಾಗದೆ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ
ಈ ಹೆದ್ದಾರಿ ನಿರ್ಮಾಣಕ್ಕೆ ಒಟ್ಟು 5100 ಕೋಟಿ ವೆಚ್ಚ ಮಾಡಲಾಗಿದೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಅಲ್ಲಲ್ಲಿ ಸಣ್ಣಪುಟ್ಟ ಕೆಲಸ ನಡೆಯುತ್ತಿದೆ. ಸದ್ಯದಲ್ಲೇ ಇದೂ ಕೂಡ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಎರಡು ನಗರಗಳ ನಡುವೆ ಹೈವೇ ನಿರ್ಮಾಣವಾಗಿರುವುದರಿಂದ ಸಂಚಾರ ದಟ್ಟಣೆ ಬಹುತೇಕ ಕಡಿಮೆಯಾಗಲಿದೆ. ಕೆಲವು ತಾಂತ್ರಿಕ ಕಾರಣಗಳಿಂದ ನಿರೀಕ್ಷಿತ ಸಮಯದಲ್ಲಿ ಇದು ಪೂರ್ಣಗೊಳ್ಳಲಿಲ್ಲ. ಆದರೂ, ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇಲ್ಲಿ ಹೆಲಿಪ್ಯಾಡ್ ಕೂಡ ನಿರ್ಮಾಣವಾಗಿದೆ. ತುರ್ತು ಸಂದರ್ಭಗಳಲ್ಲಿ ಇದನ್ನು ಬಳಕೆ ಮಾಡಿಕೊಳ್ಳಬಹುದು ಎಂದರು.
ವಿಧಾನಸಭೆ ಚುನಾವಣೆಗೆ ಮತದಾರರ ಅಂತಿಮ ಪಟ್ಟಿ ಪ್ರಕಟ
ನೂತನ ಹೆದ್ದಾರಿಗೆ ಕಾವೇರಿ-ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಬೇಕೆಂಬ ಬೇಡಿಕೆ ಬಂದಿದೆ. ಎಲ್ಲರ ಅಭಿಪ್ರಾಯ ಪಡೆದು ಸೂಕ್ತ ಹೆಸರನ್ನು ಘೋಷಣೆ ಮಾಡುತ್ತೇವೆ ಎಂದು ಗಡ್ಕರಿ ಹೇಳಿದರು.
Bengaluru, Mysore, expressway, projects, Minister, Nitin Gadkari,