Homeಬೆಂಗಳೂರುವೀಕೆಂಡ್ ಕಿಕ್ : ಬೆಂಗಳೂರಲ್ಲಿ ಒಂದೇ ದಿನ 1211 ಡ್ರಂಕ್‌ ಅಂಡ್‌ ಡ್ರೈವ್‌ ಪ್ರಕರಣ ದಾಖಲು

ವೀಕೆಂಡ್ ಕಿಕ್ : ಬೆಂಗಳೂರಲ್ಲಿ ಒಂದೇ ದಿನ 1211 ಡ್ರಂಕ್‌ ಅಂಡ್‌ ಡ್ರೈವ್‌ ಪ್ರಕರಣ ದಾಖಲು

1211 drunk driving cases registered in Bengaluru in a single day

ಬೆಂಗಳೂರು,ಜು.13-ಮದ್ಯ ಸೇವಿಸಿ ವಾಹನ ಚಲಾಯಿಸುವ ವಾಹನ ಚಾಲಕರು ಹಾಗೂ ಸವಾರರ ವಿರುದ್ಧ ನಗರ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 1211 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಜು.6 ರಿಂದ ನಿನ್ನೆಯವರೆಗೆ ನಗರದ 53 ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಿವಿಧ ಮಾದರಿಯ 82,909 ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿದಾಗ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಅದೇ ರೀತಿ ಅತೀ ವೇಗದಿಂದ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು 222 ಪ್ರಕರಣಗಳನ್ನು ದಾಖಲಿಸಿಕೊಂಡು 2.23ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.

ರಸ್ತೆ ಸುರಕ್ಷತೆಗಾಗಿ ಈ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ಸಹ ಹಮಿ ಕೊಳ್ಳಲಾಗುವುದೆಂದು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News