Homeಬೆಂಗಳೂರುವೀಕೆಂಡ್ ನಶೆ : ಬೆಂಗಳೂರಲ್ಲಿ 596 ಡ್ರಂಕ್‌ ಅಂಡ್‌ ಡ್ರೈವ್‌ ಪ್ರಕರಣ ದಾಖಲು

ವೀಕೆಂಡ್ ನಶೆ : ಬೆಂಗಳೂರಲ್ಲಿ 596 ಡ್ರಂಕ್‌ ಅಂಡ್‌ ಡ್ರೈವ್‌ ಪ್ರಕರಣ ದಾಖಲು

596 drunk and drive and 178 rash drive cases registered

ಬೆಂಗಳೂರು, ಆ.24- ಮದ್ಯ ಸೇವಿಸಿ ವಾಹನ ಚಲಾಯಿಸುವ ಚಾಲಕರು ಹಾಗೂ ಸವಾರರ ವಿರುದ್ಧ ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 596 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಆ.17ರಿಂದ ನಿನ್ನೆಯವರೆಗೆ ನಗರದ 53 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 38,027 ವಿವಿಧ ಮಾದರಿಯ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ 596 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಅದೇ ರೀತಿ ಅತಿವೇಗದಿಂದ ವಾಹನ ಚಲಾಯಿಸುವವರ ವಿರುದ್ಧವೂ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, 178 ಪ್ರಕರಣಗಳನ್ನು ದಾಖಲಿಸಿಕೊಂಡು 1.79 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ರಸ್ತೆ ಸುರಕ್ಷತೆಗಾಗಿ ಇಂತಹ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ಮುಂದುವರಿಸಲಾಗುವುದು ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
spot_img

Latest News