Tuesday, May 5, 2026
Homeಬೆಂಗಳೂರು6 ಮಂದಿ ಡ್ರಗ್‌ಪೆಡ್ಲರ್‌ಗಳ ಬಂಧನ : 20.10 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

6 ಮಂದಿ ಡ್ರಗ್‌ಪೆಡ್ಲರ್‌ಗಳ ಬಂಧನ : 20.10 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

6 drug peddlers arrested: Narcotics worth Rs 20.10 crore seized

ಬೆಂಗಳೂರು,ಮೇ 5-ನಗರದ ಯಶವಂತಪುರ ಮತ್ತು ನಂದಿನಿ ಲೇಔಟ್‌ ಠಾಣೆ ಪೊಲೀಸರು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಕೇರಳದ ಇಬ್ಬರು ಡ್ರಗ್‌ಪೆಡ್ಲರ್‌ಗಳು ಸೇರಿದಂತೆ ಆರು ಮಂದಿಯನ್ನು ಬಂಧಿಸಿ 20.10 ಕೋಟಿ ಮೌಲ್ಯದ ಗಾಂಜಾ, ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಯಶವಂತಪುರ:
ರಸ್ತೆ ಬದಿ ಮಾದಕ ವಸ್ತುಗಳು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಯಶವಂತಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸ್ಥಳೀಯ ನಾಲ್ವರನ್ನು ಬಂಧಿಸಿ 4.87 ಕೋಟಿ ಮೌಲ್ಯದ (ಮಾರುಕಟ್ಟೆ ಮೌಲ್ಯ 9.47 ಕೋಟಿ ) 4 ಕೆಜಿ 878 ಗ್ರಾಂ ಎಂಡಿಎಂಎ, 1.62 ಲಕ್ಷ ನಗದು, 4 ಮೊಬೈಲ್‌ ಹಾಗೂ 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಮತ್ತೊಂದು ಪ್ರಕರಣದಲ್ಲಿ 3.18 ಕೋಟಿ (ಮಾರುಕಟ್ಟೆ ಮೌಲ್ಯ 6.36 ಕೋಟಿ) ಮೌಲ್ಯದ 3 ಕೆಜಿ 180 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ನಂದಿನಿ ಲೇಔಟ್‌ ಠಾಣೆ ಪೊಲೀಸರು ಕೇರಳದ ಇಬ್ಬರನ್ನು ಬಂಧಿಸಿ 2 ಕೋಟಿ ಮೌಲ್ಯದ (ಮಾರುಕಟ್ಟೆ ಮೌಲ್ಯ 4 ಕೋಟಿ) 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಈ ಆರು ಮಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಹೊರ ರಾಜ್ಯದ ಮತ್ತು ಸ್ಥಳೀಯ ಅಪರಿಚಿತರಿಂದ ಮಾದಕ ವಸ್ತುವನ್ನು ಕಡಿಮೆ ಬೆಲೆಗೆ ಖರೀದಿಸಿಕೊಂಡು ಬಂದು ಹೆಚ್ಚಿನ ಬೆಲೆಗೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದುದ್ದಾಗಿ ಹೇಳಿದ್ದಾರೆ.

ಈ ಪ್ರಕರಣಗಳಲ್ಲಿ ಆರೋಪಿಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದವರ ಪತ್ತೆಕಾರ್ಯ ಮುಂದುವರೆದಿದ್ದು, ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ. ಈ ಕಾರ್ಯಾಚರಣೆಯನ್ನು ಇನ್‌್ಸಪೆಕ್ಟರ್‌ಗಳಾದ ಮಂಜುನಾಥ್‌, ಗಣಪತಿ ಹಾಗೂ ಸಿಬ್ಬಂದಿ ತಂಡ ಕೈಗೊಂಡು ಡ್ರಗ್‌ಪೆಡ್ಲರ್‌ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

RELATED ARTICLES

Latest News