Homeಬೆಂಗಳೂರುಬೆಂಗಳೂರಲ್ಲಿ 624 ಡ್ರಂಕ್‌ ಅಂಡ್‌ ಡ್ರೈವ್‌ ಹಾಗೂ 280 ಪ್ರಕರಣ ದಾಖಲು

ಬೆಂಗಳೂರಲ್ಲಿ 624 ಡ್ರಂಕ್‌ ಅಂಡ್‌ ಡ್ರೈವ್‌ ಹಾಗೂ 280 ಪ್ರಕರಣ ದಾಖಲು

624 drunk and drive cases and 280 cases registered in Bengaluru

ಬೆಂಗಳೂರು,ಆ.10-ಮದ್ಯ ಸೇವಿಸಿ ವಾಹನ ಚಲಾಯಿಸುವ ವಾಹನ ಚಾಲಕರು ಹಾಗೂ ಸವಾರರ ವಿರುದ್ಧ ನಗರ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 624 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಆ.3 ರಿಂದ ನಿನ್ನೆಯವರೆಗೆ ನಗರದ 53 ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 39,913 ವಿವಿಧ ಮಾದರಿಯ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿದಾಗ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಅದೇ ರೀತಿ ಅತೀ ವೇಗದಿಂದ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ 280 ಪ್ರಕರಣಗಳನ್ನು ದಾಖಲಿಸಿಕೊಂಡು 2.80 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.
ರಸ್ತೆ ಸುರಕ್ಷತೆಗಾಗಿ ಈ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ಸಹ ಹಮಿಕೊಳ್ಳ ಲಾಗುವುದೆಂದು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
spot_img

Latest News