ಬೆಂಗಳೂರು, ನ.24- ಸಾಧು ವಾಸವಾನಿ ಜಯಂತಿ ಹಿನ್ನೆಲೆಯಲ್ಲಿ ನಾಳೆ ನಗರದಾದ್ಯಂತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಾಯಿಖಾನೆಗಳಲ್ಲಿ ನಾಳೆ ಪ್ರಾಣಿವಧೆ ಮಾಡುವುದನ್ನು ನಿಷೇಧಿಸಲಾಗಿದೆ.
ಅಲ್ಲದೆ, ಮಾಂಸದ ಅಂಗಡಿಗಳಲ್ಲಿ ಮಾಂಸ ಮಾರಾಟಕ್ಕೂ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಾಧಿಕಾರದ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಸಾಧು ವಾಸವಾನಿ ಜಯಂತಿ ಪ್ರಯುಕ್ತ ಈ ಆದೇಶ ಹೊರಡಿಸಲಾಗಿದ್ದು, ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಎಲ್ಲ ಕಸಾಯಿಖಾನೆಗಳು ಹಾಗೂ ಮಾಂಸದ ಅಂಗಡಿಗಳ ಮಾಲೀಕರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.
