Homeಬೆಂಗಳೂರುಬೆಂಗಳೂರು : ಕತ್ತು ಕೊಯ್ದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕತ್ತು ಕೊಯ್ದು ಪತ್ನಿಯನ್ನು ಕೊಂದ ಪತಿ

Bengaluru: Husband kills wife by slitting throat

ಬೆಂಗಳೂರು,ಮಾ.16- ದಂಪತಿ ನಡುವೆ ಜಗಳವಾಗಿ ಪತ್ನಿ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಮೈಕೋಲೇಔಟ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.ಬಿಳೇಕಲ್ಲಳ್ಳಿ ನಿವಾಸಿ ರಂಗಮ್ಮ(47) ಕೊಲೆಯಾದ ದುರ್ದೈವಿ. ಇವರು ಮನೆಗೆಲಸ ಮಾಡಿಕೊಂಡಿದ್ದರು.

ಸೆಕ್ಯೂರಿಟಿಗಾರ್ಡ್‌ ಕೆಲಸ ಮಾಡಿಕೊಂಡಿರುವ ಪತಿ ನಾಗರಾಜ ಹಾಗೂ ಗಂಗಮ ನಡುವೆ ಕೌಟುಂಬಿಕ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು. ಮಗ ಕೆಲಸಕ್ಕೆ ಹೋಗಿದ್ದಾಗ ರಾತ್ರಿ ದಂಪತಿ ಮಾತ್ರ ಇದ್ದರು . ಸುಮಾರು 10 ಗಂಟೆ ಸಮಯದಲ್ಲಿ
ದಂಪತಿ ನಡುವೆ ಮತ್ತೆ ಜಗಳ ನಡೆದಿದೆ.

ಗಲಾಟೆ ವಿಕೋಪಕ್ಕೆ ಹೋದಾಗ ನಾಗರಾಜ ಅಡುಗೆ ಮನೆಗೆ ಹೋಗಿ ಚಾಕು ತೆಗೆದುಕೊಂಡು ಬಂದು ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇವರ ಮನೆಯಲ್ಲಿ ಗಲಾಟೆಯಾಗುತ್ತಿರುವುದನ್ನು ಗಮನಿಸಿ ನೆರೆಹೊರೆಯವರು ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ರಂಗಮ ಕೊಲೆಯಾಗಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
spot_img

Latest News