Homeಬೆಂಗಳೂರುಡಿವೈಡರ್‌ಗೆ ಬೈಕ್‌ ಡಿಕ್ಕಿ : ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿ : ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳ ಸಾವು

Bike hits divider: Two nursing students die

ಬೆಂಗಳೂರು,ಜೂ.13- ಡಿವೈಡರ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಮೈಸೂರು ರಸ್ತೆಯ ಆರ್‌.ಆರ್‌ ಡೆಂಟಲ್‌ ಕಾಲೇಜು ಬಳಿ ಸಂಭವಿಸಿದೆ.

ಕೇರಳದ ಅತುಲ್‌(21) ಮತ್ತು ಗೌರಿಶಂಕರ್‌(21) ಮೃತಪಟ್ಟಿರುವ ನರ್ಸಿಂಗ್‌ ವಿದ್ಯಾರ್ಥಿಗಳು. ಇವರು ಬಿಜಿಎಸ್‌‍ ನರ್ಸಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡಿಕೊಂಡು ದೊಡ್ಡಬೆಲೆಯಲ್ಲಿ ವಾಸವಾಗಿದ್ದರು.

ಇಂದು ಮುಂಜಾನೆ 2 ಗಂಟೆ ಸಮಯದಲ್ಲಿ ಮೈಸೂರು ಕಡೆಯಿಂದ ಇಬ್ಬರೂ ಬೈಕ್‌ನಲ್ಲಿ ಬರುತ್ತಿದ್ದಾಗ ಆರ್‌.ಆರ್‌ ಡೆಂಟಲ್‌ ಕಾಲೇಜು ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಇಬ್ಬರು ತೀವ್ರವಾಗಿ ಗಾಯಗೊಂಡರು.

ಸಮೀಪದಲ್ಲೇ ಇರುವ ಆರ್‌.ಆರ್‌. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಅಪಘಾತಕ್ಕೆ ಅತಿವೇಗ ಮತ್ತು ಅಜಾಗರೂಕತೆಯೇ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

RELATED ARTICLES

Latest News