ಬೆಂಗಳೂರು,ಮೇ 2-ನಗರದ ಎರಡು ಕಡೆ ಅಗ್ನಿ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜರಹಳ್ಳಿ ಸಮೀಪದ ರಘುವನಹಳ್ಳಿಯಲ್ಲಿ ಶಾಮಿಯಾನದ ಗೋದಾಮು ಇದೆ.
ಇಂದು ಬೆಳಗಿನ ಜಾವ 2 ಗಂಟೆ ಸುಮಾರಿನಲ್ಲಿ ಈ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿ ಶಾಮಕದಳಕ್ಕೆ ವಿಷಯ ತಿಳಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ವಾಹನದೊಂದಿಗೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಮಾಗಡಿ ರಸ್ತೆ:
ರಾಜಾಜಿನಗರ ಇಂಡಸ್ಟ್ರೀಯಲ್ ಪ್ರದೇಶದಲ್ಲಿರುವ ಆಯಿಲ್ ಫಿಲ್ಟರ್ ಗೋದಾಮಿನಲ್ಲಿ ಇಂದು ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸುದ್ದಿ ತಿಳಿದಾಕ್ಷಣ ವಾಹನದೊಂದಿಗೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಈ ಎರಡು ಪ್ರಕರಣಗಳಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಆಯಾಯಾ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
