ಬೆಂಗಳೂರು, ನ.20- ನಗರದಲ್ಲಿ ಮತ್ತಷ್ಟು ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲು ಮುಂದಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಆರಂಭದಲ್ಲೇ ಸಾರ್ವಜನಿಕರ ಆಕ್ಷೇಪ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮೊದಲು ಹಳೆಯ ಕ್ಯಾಂಟೀನ್ಗಳ ಸುಧಾರಣೆಗೆ ಜಿಬಿಎ ಚಿಂತನೆ ನಡೆಸಿದೆ.
ಹೊಸದಾಗಿ 25 ಇಂದಿರಾ ಕ್ಯಾಂಟೀನ್ಗಳನ್ನು ತೆರೆಯಲು ಸೂಕ್ತ ಸ್ಥಳಗಳ ಹುಡುಕಾಟ ನಡೆಸುತ್ತಿರುವ ಬೆನ್ನಲ್ಲೇ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕ್ಯಾಂಟೀನ್ಗಳಲ್ಲಿ ವಿತರಿಸಲಾಗು ತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ದೂರುಗಳು ಕೇಳಿಬಂದಿವೆ.
ನಗರದ ಇಂದಿರಾ ಕ್ಯಾಂಟೀನ್ಗಳಲ್ಲಿ ಸಾರ್ವಜನಿಕರಿಗೆ ವಿತರಿಸ ಲಾಗುತ್ತಿರುವ ಉಪಾಹಾರದ ಗುಣಮಟ್ಟ ಸಮರ್ಪಕವಾಗಿಲ್ಲ. ಆಹಾರದ ಗುಣಮಟ್ಟ, ಶುಚಿತ್ವ ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಉಪಾಹಾರದ ಗುಣಮಟ್ಟವನ್ನು ಪರಿಶೀಲಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಯಾಂಟೀನ್ಗಳ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಲು ಜಿಬಿಎ ಮುಂದಾಗಿದೆ.
ಆಹಾರದ ಗುಣಮಟ್ಟ ಪರಿಶೀಲನೆಗೆ ತಂಡ:
ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ನಗರದ ಇಂದಿರಾ ಕ್ಯಾಂಟೀನ್ಗಳಲ್ಲಿ ವಿತರಿಸಲಾಗುತ್ತಿರುವ ಆಹಾರದ ಗುಣ ಮಟ್ಟ ವನ್ನು ಪರಿಶೀಲಿಸಲು ವಿಶೇಷ ತಂಡ ರಚಿಸಲು ಜಿಬಿಎ ನಿರ್ಧರಿಸಿದೆ. ಕ್ಯಾಂಟೀನ್ಗಳಲ್ಲಿ ನೀಡಲಾಗುತ್ತಿರುವ ಉಪಾಹಾರದ ಗುಣಮಟ್ಟವನ್ನು ಪರೀಕ್ಷಿಸಿ, ಲೋಪದೋಷಗಳಿದ್ದರೆ ಅವುಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರದ ಇಂದಿರಾ ಕ್ಯಾಂಟೀನ್ಗಳಲ್ಲಿ ವಿತರಿಸಲಾಗುತ್ತಿರುವ ಆಹಾರದ ಗುಣಮಟ್ಟವನ್ನು ಪರಿಶೀಲಿಸುವಂತೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
ಹಳೆಯ ಕ್ಯಾಂಟೀನ್ಗಳ ಸುಧಾರಣೆಗೆ ಆದ್ಯತೆ?
ನಗರದಲ್ಲಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ಗಳ ಸಂಖ್ಯೆಯನ್ನು ಹೆಚ್ಚಿಸಲು ಜಿಬಿಎ ಯೋಜನೆ ರೂಪಿಸಿದೆ. ಇದರ ಭಾಗವಾಗಿ ಹೊಸದಾಗಿ 25 ಕ್ಯಾಂಟೀನ್ಗಳನ್ನು ಆರಂಭಿಸಲು ಜಾಗ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಈಗಿರುವ ಕ್ಯಾಂಟೀನ್ಗಳಲ್ಲೇ ಆಹಾರದ ಗುಣಮಟ್ಟದ ಕುರಿತು ದೂರುಗಳು ಕೇಳಿಬರುತ್ತಿರುವುದು ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ.
