ಬೆಂಗಳೂರು, ಜ.19- ಕೌಲಾಲಂಪುರದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿರುವ ಪ್ರಯಾಣಿಕರೊಬ್ಬರನ್ನು ಬಂಧಿಸಿರುವ ಕಸ್ಟಮ್ಸೌ ಅಧಿಕಾರಿಗಳು ಸುಮಾರು 1.73 ಕೋಟಿ ರೂ. ಮೌಲ್ಯದ ಹೈಡ್ರೊಪೊನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ವಿದೇಶದಿಂದ ಬಂದು ವಿಮಾನನಿಲ್ದಾಣದಿಂದ ಹೊರಹೋಗುವಾಗ ಅನುಮಾನದ ಮೇಲೆ ಪ್ರಯಾಣಿಕರನ್ನು ತಡೆದು ಅವರ ಸರಕನ್ನು ಪರಿಶೀಲಿಸಿದಾಗ ಅದರಲ್ಲಿ 4.96 ಕೆಜಿ ಹೈಡ್ರೊಪೊನಿಕ್ ಗಾಂಜಾ ಪತ್ತೆಯಾಗಿದೆ ಎಂದು ಕಸ್ಟಮ್ಸೌ ಮೂಲಗಳು ತಿಳಿಸಿವೆ.
ಪ್ರಕರಣ ಕುರಿತಂತೆ ತನಿಖೆ ಕೈಗೊಳ್ಳಲಾಗಿದ್ದು, ಇದನ್ನು ಎಲ್ಲಿಗೆ ಸರಬರಾಜು ಮಾಡಲಾಗುತ್ತಿತ್ತು ಎಂಬುದರ ಬಗ್ಗೆ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ತಿಳಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಸರಕನ್ನು ಪಡೆಯಲು ಬಂದ ವ್ಯಕ್ತಿಯನ್ನು ವಶಕ್ಕೆ ಪಡೆದು ಅದನ್ನು ಪರಿಶೀಲಿಸಿದಾಗ ಅದರಲ್ಲಿ ವನ್ಯಪಕ್ಷಿಗಳ ಅಕ್ರಮ ಕಳ್ಳಸಾಗಣೆ ಬೆಳಕಿಗೆ ಬಂದಿದೆ.
ರಸ್ತೆ ಬದಿ ಮಾದಕ ವಸ್ತು ಮಾರಾಟ : ಡ್ರಗ್ ಪೆಡ್ಲರ್ ಸೆರೆ
ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್‌ವೊಬ್ಬನನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುಜರಾತಿನ ಅಂಬಾ ರಾಮ್ (30) ಬಂಽತ ಡ್ರಗ್ ಪೆಡ್ಲರ್. ಪೊಲೀಸರು ಈತನಿಂದ ಒಂದು ದ್ವಿಚಕ್ರ ವಾಹನ ಹಾಗೂ 13 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಉಲ್ಲಾಳ ಕೆರೆ ಬಳಿ ಇರುವ ಬಸ್ ನಿಲ್ದಾಣ ಪಕ್ಕದ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡು ಆರೋಪಿ ಸಾರ್ವಜನಿಕರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಜ್ಞಾನಭಾರತಿ ಠಾಣೆ ಪೊಲೀಸರಿಗೆ ಲಭಿಸಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಽಸಿ ಮಾದಕ ವಸ್ತು ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಜ್ಞಾನಭಾರತಿ ಠಾಣೆ ಪೊಲೀಸರು ಆರೋಪಿ ಡ್ರಗ್‌್ಸ ಅನ್ನು ಎಲ್ಲಿಂದ ತಂದಿದ್ದ ಎಂಬುವುದರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
