ಬೆಂಗಳೂರು,ಆ.22- ದುಷ್ಕರ್ಮಿಗಳು ತೃತೀಯ ಲಿಂಗಿಯ ಕುತ್ತಿಗೆ ಹಾಗೂ ಎದೆಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಕೊಲೆಯಾದ ತೃತೀಯ ಲಿಂಗಿಯನ್ನು ದೇವಿ (30) ಎಂದು ಗುರುತಿಸಲಾಗಿದೆ. ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಹೊರಹೋಗುವ ರಸ್ತೆಯಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿನಲ್ಲಿ ದೇವಿ ಶವ ರಕ್ತಸಿಕ್ತವಾಗಿ ಪತ್ತೆಯಾಗಿದೆ.ಸುದ್ದಿ ತಿಳಿದು ಉಪ್ಪಾರಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.
ಯಾವುದೋ ವಿಚಾರಕ್ಕೆ ತೃತೀಯ ಲಿಂಗಿ ಹಾಗೂ ದುಷ್ಕರ್ಮಿಗಳ ನಡುವೆ ಜಗಳವಾಗಿ ಈ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.ಘಟನಾ ಸ್ಥಳದ ಸುತ್ತಮುತ್ತಲಿನಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲಿಸಿ ಯಾವ ಕಾರಣಕ್ಕಾಗಿ ಯಾರು ಕೊಲೆ ಮಾಡಿದ್ದಾರೆಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ.ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಹಿರಿಯ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.
