ಬೆಂಗಳೂರು,ಜೂ.13- ಮಗಳನ್ನು ಕಾಲೇಜಿಗೆ ಬಿಡಲು ಸ್ಕೂಟರ್ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮೃತಪಟ್ಟಿರುವ ಘಟನೆ ವೈಟ್ಫೀಲ್್ಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ನಲ್ಲೂರಹಳ್ಳಿ ನಿವಾಸಿ ಕಾಂತಾ (42) ಮೃತಪಟ್ಟ ದುರ್ದೈವಿ. ಇವರ ಮಗಳು ನೇಹಾ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇಂದು ಬೆಳಗ್ಗೆ 7.45 ರ ಸುಮಾರಿನಲ್ಲಿ ಮಗಳನ್ನು ಕಾಲೇಜಿಗೆ ಬಿಡಲು ಕಾಂತಾ ಅವರು ಸ್ಕೂಟರ್ನಲ್ಲಿ ಕರೆದುಕೊಂಡು ವರ್ತೂರಿನಿಂದ ಮಾರತಹಳ್ಳಿ ಕಡೆಗೆ ಹೋಗುತ್ತಿದ್ದರು.
ಸಿದ್ದಾಪುರದ ಮೀನಾಕ್ಷಿ ಲೇಔಟ್ ಬಳಿ ರಸ್ತೆಯ ಗುಂಡಿಯಲ್ಲಿ ಮಳೆ ನೀರು ನಿಂತಿರುವುದು ಗಮನಿಸಿದ ಕಾಂತಾ ಅವರು ತಮ ಸ್ಕೂಟರ್ನನ್ನು ಪಕ್ಕಕ್ಕೆ ತೆಗೆದುಕೊಳ್ಳುತ್ತಿದ್ದಂತೆ ಹಿಂದಿನಿಂದ ವೇಗವಾಗಿ ಬಂದ ಶಾಲಾ ಬಸ್ ಡಿಕ್ಕಿ ಹೊಡೆದಿದೆ.ಪರಿಣಾಮ ಕಾಂತಾ ಅವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ವೈಟ್ಫೀಲ್ಡ್ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೈಕ್ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ಕಾರ್ಪೆಂಟರ್ ಬಲಿ
ಬೆಂಗಳೂರು,ಜೂ.13- ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಖದೇವ್ (45) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ
ಕಾರ್ಪೆಂಟರ್.
ಇಂದು ಬೆಳಗ್ಗೆ 6.45 ರ ಸುಮಾರಿನಲ್ಲಿ ನಾಲ್ಕು ಮಂದಿ ಕಾರಿನಲ್ಲಿ ನಗರದಿಂದ ಮೈಸೂರು ಕಡೆಗೆ ತೆರಳುತ್ತಿದ್ದಾಗ ಮೈಸೂರು ರಸ್ತೆಯ ಮೈಲಸಂದ್ರ ಗೇಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ಗಳಿಗೆ ಅಪ್ಪಳಿಸಿ ನಂತರ ಉರುಳಿ ಬಿದ್ದಿದೆ.
ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಅಪಘಾತದಿಂದಾಗಿ ಬೈಕ್ಗಳಲಿದ್ದ ಇಬ್ಬರು ಸವಾರರು ಸಹ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸುದ್ದಿ ತಿಳಿದು ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಅಪಘಾತಕ್ಕೆ ಚಾಲಕನ ಅತಿ ವೇಗ, ಅಜಾಗರೂಕತೆ ಚಾಲನೆಯೇ ಕಾರಣವೆಂಬುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಕೆಎಸ್ಆರ್ಟಿಸಿ ಬಸ್ಗೆ ಲಾರಿ ಡಿಕ್ಕಿ : ಪ್ರಾಣ ಕಳೆದುಕೊಂಡ ಇಬ್ಬರು ಪ್ರಯಾಣಿಕರು
ಬೆಂಗಳೂರು,ಜೂ.13- ಮುಂದೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬಾಗಲಕೋಟೆಯ ನಿವಾಸಿ ರಾಣಿ ದೇಸಾಯಿ (35) ಹಾಗೂ ನರಗುಂದ ನಿವಾಸಿ ಶಿವಕುಮಾರ್ (25) ಮೃತಪಟ್ಟವರು.ಇಂದು ಬೆಳಗ್ಗೆ 11.30 ರ ಸುಮಾರಿನಲ್ಲಿ ರಾಷ್ಟ್ರೀಯ
ಹೆದ್ದಾರಿ ಅಗನವಾಡಿ ಬಳಿ ಕೆಎಸ್ಆರ್ಟಿಸಿ ಬಸ್ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ನಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಸುದ್ದಿ ತಿಳಿದು ಬೀಳಗಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
