Homeಬೆಂಗಳೂರುಇದ್ದಕ್ಕಿದ್ದಂತೆ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

ಇದ್ದಕ್ಕಿದ್ದಂತೆ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

ಬೆಂಗಳೂರು,ಅ.10-ಚಲಿಸುತ್ತಿದ್ದ ಕಾರೊಂದರ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಂದು ಬೆಳಗ್ಗೆ 9.30 ರ ಸುಮಾರಿನಲ್ಲಿ ಇನ್‌ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್‌‍ ಕಮಿಷನರ್‌ ಕಚೇರಿ ಮುಂಭಾಗ ಕಾರು ಹೋಗುತ್ತಿದ್ದಾಗ ಇಂಜಿನ್‌ನಲ್ಲಿ ಇದ್ದಕ್ಕಿದ್ದಂಗೆ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ.

ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ತಕ್ಷಣ ಗಮನಿಸಿ ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೊರಗೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸಾರ್ವಜನಿಕರು ಹಾಗೂ ಸ್ಥಳೀಯ ಪೊಲೀಸರು ಬೆಂಕಿಯನ್ನು ನಂದಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಅಗ್ನಿಶಾಮಕ ಸಿಬ್ಬಂದಿ ವಾಹದೊಂದಿಗೆ ಬಂದು ಬೆಂಕಿಯನ್ನು ನಂದಿಸಿ ಬಾರಿ ಅನಾಹುತ ತಪ್ಪಿಸಿದ್ದಾರೆ. ಬೆಂಕಿಯಿಂದಾಗಿ ಕಾರಿನ ಮುಂಭಾಗ ಭಾಗಶಃ ಹಾನಿಯಾಗಿದೆ.

RELATED ARTICLES
spot_img

Latest News