Wednesday, December 24, 2025
Homeಬೆಂಗಳೂರುಕುಡಿದು ವಾಹನ ಚಲಾಯಿಸುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ , 439 ಪ್ರಕರಣ ದಾಖಲು

ಕುಡಿದು ವಾಹನ ಚಲಾಯಿಸುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ , 439 ಪ್ರಕರಣ ದಾಖಲು

Police conduct special operation against drunk drivers, 439 cases registered

ಬೆಂಗಳೂರು,ಡಿ.24- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸವಾರರ ವಿರುದ್ಧ ನಗರದಾದ್ಯಂತ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 439 ಪ್ರಕರಣಗಳನ್ನು ದಾಖಲಿಸಿದ್ದಾರೆ.

ನಿನ್ನೆ ಈ ವಿಶೇಷ ಕಾರ್ಯಾಚರಣೆ ಕೈಗೊಂಡು 31,075 ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ಮಾಡಿರುವ ಪೊಲೀಸರು, ಈ ವೇಳೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಸವಾರ ಹಾಗೂ ಚಾಲಕರ ವಿರುದ್ಧ ಒಟ್ಟು 439 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಮೊನ್ನೆ ನಡೆದ ಕಾರ್ಯಾಚರಣೆಯಲ್ಲಿ 349 ವಾಹನ ಚಾಲಕರು ಹಾಗೂ ಸವಾರರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಈ ವಿಶೇಷ ಕಾರ್ಯಾಚರಣೆಯಲ್ಲಿ 24,786ಕ್ಕೂ ಹೆಚ್ಚು ವಾಹನಗಳನ್ನು ಸಂಚಾರಿ ಪೊಲೀಸರು ತಪಾಸಣೆ ಮಾಡಿದ್ದು, ಈ ವೇಳೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಸವಾರರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಈ ವಿಶೇಷ ಕಾರ್ಯಾಚರಣೆಯನ್ನು ಡಿ.31ರವರೆಗೂ ಮುಂದುವರೆಸಲಾಗುವುದು ಎಂದು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News