ಬೆಂಗಳೂರು, ನ.12- ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ರೈಲು ನಿಲ್ದಾಣದಿಂದ ಬಿಹಾರಕ್ಕೆ ಪ್ರಯಾಣಿಸಲು ಆಗಮಿಸಿದ್ದ ಮಹಿಳೆಯೊಬ್ಬರು ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದು, ಅವರನ್ನು ಪುಲಿಕೇಶಿನಗರ ಠಾಣೆ ಪೊಲೀಸರು ತಕ್ಷಣ ರಕ್ಷಿಸಿದ್ದಾರೆ.
ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬರು ಮೊದಲನೇ ಮಹಡಿಗೆ ತೆರಳಲು ಲಿಫ್ಟ್ ಬಳಸುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ ಏಕಾಏಕಿ ಸ್ಥಗಿತಗೊಂಡು ಅವರು ಒಳಗೆ ಸಿಲುಕಿಕೊಂಡಿದ್ದಾರೆ.
ಆ ಮಹಿಳೆ ತಕ್ಷಣ ನಮ್ಮ-112 ತುರ್ತು ಸಹಾಯವಾಣಿಗೆ ಕರೆ ಮಾಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ನಮ್ಮ-112 ಸಿಬ್ಬಂದಿ, ಹೊಯ್ಸಳ ಕರ್ತವ್ಯದಲ್ಲಿದ್ದ ಎಎಸ್ಐ ಚಂದ್ರಶೇಖರ್ ಮತ್ತು ಎಚ್ಸಿ ಯಲಗುಂಡ ಯಲಮೇಲಿ ಅವರಿಗೆ ಮಾಹಿತಿಯನ್ನು ರವಾನಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪುಲಿಕೇಶಿನಗರ ಠಾಣೆ ಪೊಲೀಸರು ರೈಲು ನಿಲ್ದಾಣದ ತಾಂತ್ರಿಕ ಸಿಬ್ಬಂದಿಯ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿ, ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದ ಮಹಿಳೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಈ ಘಟನೆಯು ತುರ್ತು ಸಂದರ್ಭಗಳಲ್ಲಿ ತ್ವರಿತ ಪೊಲೀಸ್ ಮಧ್ಯಪ್ರವೇಶ ಮತ್ತು ಸಮನ್ವಯದ ಮೂಲಕ ನೆರವು ಒದಗಿಸುವಲ್ಲಿ ನಮ್ಮ-112 ತುರ್ತು ಪ್ರತಿಕ್ರಿಯೆ ವ್ಯವಸ್ಥೆಯ ಮಹತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
