Homeಬೆಂಗಳೂರುಗುಂಡೇಟಿನಿಂದ ಗುಜರಿ ವ್ಯಾಪಾರಿ ಸಾವು: ಆತ್ಮಹತ್ಯೆಯೋ, ಕೊಲೆಯೋ?

ಗುಂಡೇಟಿನಿಂದ ಗುಜರಿ ವ್ಯಾಪಾರಿ ಸಾವು: ಆತ್ಮಹತ್ಯೆಯೋ, ಕೊಲೆಯೋ?

ಬೆಂಗಳೂರು, ನ.17- ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಗುಜರಿ ವ್ಯಾಪಾರಿಯೊಬ್ಬರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ರಸ್ತೆ ನಿವಾಸಿ ಇಸ್ರಾಪಾಷ (45) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಗುಜರಿ ವ್ಯಾಪಾರ ಮಾಡುತ್ತಿದ್ದರು ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಕಾರಿನೊಳಗೆ ಚಾಲಕನ ಸೀಟ್‌ನಲ್ಲಿ ಇವರ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಬುಲೆಟ್ ಕೂಡ ಬಿದ್ದಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಸುದ್ದಿ ತಿಳಿದ ಬಾಗಲೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಫ್‌ಎಸ್‌ಎಲ್ ಅಧಿಕಾರಿಗಳು ಬಂದು ಪರಿಶೀಲಿಸಿದ ನಂತರವೇ ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದು ನಿಖರವಾಗಿ ತಿಳಿದುಬರಲಿದೆ. ಇವರು ನಿನ್ನೆ ರಾತ್ರಿ ಕಾರಿನಲ್ಲಿ ಇಲ್ಲಿಗೆ ಬಂದು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿ ತನಿಖೆ ಮುಂದುವರಿಸಿದ್ದಾರೆ.

RELATED ARTICLES

Latest News