Homeಬೆಂಗಳೂರುಅಪ್ರಾಪ್ತರಿಗೆ ವಾಹನ ನೀಡಿದರೆ ಪೋಷಕರ ವಿರುದ್ಧ ಕಠಿಣ ಕ್ರಮ

ಅಪ್ರಾಪ್ತರಿಗೆ ವಾಹನ ನೀಡಿದರೆ ಪೋಷಕರ ವಿರುದ್ಧ ಕಠಿಣ ಕ್ರಮ

Strict action against parents if minors are given vehicles

ಬೆಂಗಳೂರು,ಫೆ.17- ವಾಹನ ಚಾಲನೆ ಮಾಡುವ ಅಪ್ರಾಪ್ತರು ಹಾಗೂ ಅವರುಗಳಿಗೆ ವಾಹನ ನೀಡುವ ಪೋಷಕರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಎಚ್ಚರಿಕೆ ನೀಡಿದ್ದಾರೆ.

ಪ್ರತಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಾ, ಹೊಸಕೋಟೆ ಹಾಗೂ ನೆಲಮಂಗಲದ ಬಳಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳ ಬಗ್ಗೆ ವಿವರಿಸುತ್ತಾ ಮೃತಪಟ್ಟವರಲ್ಲಿ ಬಹುತೇಕ ಅಪ್ರಾಪ್ತರು. ಪೋಷಕರು ತಮ ಮಕ್ಕಳು ಎಲ್ಲಿಗೆ ಹೋಗುತ್ತಾರೆ ಎಂಬುವುದರ ಬಗ್ಗೆ ನಿಗಾ ವಹಿಸಬೇಕು ಎಂದು ಹೇಳಿದರು.

ಅಪ್ರಾಪ್ತರು ವಾಹನ ಚಾಲನೆ ಮಾಡುವುದು ನಿಯಮ ಉಲ್ಲಂಘನೆಯಾಗುತ್ತದೆ. ಈ ಬಗ್ಗೆ ನಮ ಪೊಲೀಸರು ಆಗಾಗ್ಗೆ ಜಾಗೃತಿ ಕಾರ್ಯಕ್ರಮ ಹಮಿಕೊಂಡು ಅರಿವು ಮೂಡಿಸುತ್ತಿದ್ದರೂ ಸಹ ಅಪ್ರಾಪ್ತರು ವಾಹನಗಳನ್ನು ಚಲಾಯಿಸುತ್ತಿರುವುದು ಕಂಡು ಬರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ನಾವು ಇದೀಗ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದೇವೆ. ಯಾರೇ ಅಪ್ರಾಪ್ತರು ಸಿಕ್ಕಿಬಿದ್ದರೂ ಅವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಅಪ್ರಾಪ್ತರು ಚಾಲನೆ ವಿರುದ್ಧ 2023ರಲ್ಲಿ 95 ಪ್ರಕರಣ, 2024 ರಲ್ಲಿ 197 ಹಾಗೂ 2025 ರಲ್ಲಿ 414 ಪ್ರಕರಣಗಳು ದಾಖಲಾಗಿವೆ ಎಂದು ಅವರು ಇದೇ ವೇಳೆ ವಿವರಿಸಿದರು.ವೀಲ್ಹಿಂಗ್‌: ನಗರದಲ್ಲಿ ಹೆಚ್ಚಾಗಿ ಅಪ್ರಾಪ್ತರು ವೀಲ್ಹಿಂಗ್‌ ಮಾಡುತ್ತಿರುವುದು ಕಂಡು ಬರುತ್ತಿದ್ದು ಅವರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಯುಕ್ತರು ಹೇಳಿದರು.

ವೀಲ್ಹಿಂಗ್‌ ಪ್ರಕರಣಗಳಲ್ಲಿ 2023ರಲ್ಲಿ 7, 2024ರಲ್ಲಿ 120 ಹಾಗೂ 2025ರಲ್ಲಿ 159 ಅಪ್ರಾಪ್ತರು ಹಾಗೂ ಪೋಷಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಅಪ್ರಾಪ್ತರು ವಾಹನಗಳನ್ನು ಚಲಾಯಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ.ಅಪ್ರಾಪ್ತ ಚಾಲನೆ ಕಂಡು ಬಂದಲ್ಲಿ ಅಂತಹ ವಾಹನಗಳನ್ನು ಜಪ್ತಿ ಮಾಡಿ ವಾಹನದ ಮಾಲೀಕರು ಹಾಗೂ ಪೋಷಕರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ರಸ್ತೆ ಸುರಕ್ಷತೆ ಎಲ್ಲರ ಹೊಣೆಗಾರಿಕೆಯಾಗಿದ್ದು, ಪೋಷಕರು ತಮ ಅಪ್ರಾಪ್ತ ಮಕ್ಕಳಿಗೆ ವಾಹನಗಳನ್ನು ಚಲಾಯಿಸಲು ನೀಡಬಾರದು ಎಂದು ಅವರು ಸಲಹೆ ಮಾಡಿದರು. ಸಂಚಾರ ನಿಯಮಗಳನ್ನು ಪಾಲಿಸಿ ಅಪ್ರಾಪ್ತ ವಯಸ್ಸಿನವರ ವಾಹನ ಚಾಲನೆಯನ್ನು ತಡೆಯಲು ಪೊಲೀಸರೊಂದಿಗೆ ಸಹಕರಿಸಬೇಕೆಂದು ಆಯುಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

RELATED ARTICLES

Latest News