ಸ್ಕೂಟರ್‌ಗೆ ಬಸ್ ಡಿಕ್ಕಿ ಜ್ಯೂವೆಲರಿ ಅಂಗಡಿ ಮಾಲೀಕ ಸಾವು
ಬೆಂಗಳೂರು,ಜ.15-ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಜ್ಯೂವೆಲರಿ ಅಂಗಡಿ ಮಾಲೀಕ ಮೃತಪಟ್ಟಿರುವ ಘಟನೆ ಹಲಸೂರುಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ನಗರತ್‌ಪೇಟೆ ನಿವಾಸಿ ಪಾರಸ್ಮಲ್ ಪಿ ಜೈನ್ (70) ಮೃತಪಟ್ಟವರು. ಇವರು ಜ್ಯೂವೆಲರಿ ಅಂಗಡಿ ಇಟ್ಟುಕೊಂಡಿದ್ದಾರೆ.
ಇಂದು ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಪಾರಸ್ಮಲ್ ಅವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ನೃಪತುಂಗ ರಸ್ತೆಯ ಕೆಆರ್‌ಸರ್ಕಲ್ ಸಮೀಪದ ಬಸ್ ನಿಲ್ದಾಣದ ಬಳಿ ಅತೀ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್‌ನಿಂದ ಬಿದ್ದ ಪಾರಸ್ಮಲ್ ಅವರು ಗಂಭೀರ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.
ಸುದ್ದಿ ತಿಳಿದು ಹಲಸೂರು ಗೇಟ್ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಾಂಗಲ್ಯಸರ ಅಪಹರಣಕಾರನ ಸೆರೆ : 2 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಬೆಂಗಳೂರು,ಜ.15- ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ದರೋಡೆಕೋರನೊಬ್ಬನನ್ನು ಬಂಧಿಸಿರುವ ಹೆಚ್.ಎಸ್.ಆರ್.ಲೇಔಟ್ ಠಾಣೆ ಪೊಲೀಸರು 2 ಲಕ್ಷರೂ ಮೌಲ್ಯದ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.ಅಗರದಲ್ಲಿ ವಾಸವಿರುವ ಮಹಿಳೆಯೊಬ್ಬರು ಡಿ.31ರಂದು ಹೆಚ್.ಎಸ್.ಆರ್.ಲೇಔಟ್‌ನ 22ನೇ ಮುಖ್ಯರಸ್ತೆಯಲ್ಲಿರುವ ಗಣೇಶ ದೇವಸ್ಥಾನಕ್ಕೆ ಹೋಗಿ, ಪೂಜೆ ಮುಗಿಸಿ ಮನೆಗೆ ಬರುವಾಗ ದ್ವಿ-ಚಕ್ರ ವಾಹನದಲ್ಲಿ ಬಂದ ದರೋಡೆಕೋರ ಕತ್ತಿನಲ್ಲಿದ್ದ ಸುಮಾರು 33 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದ.
ಈ ಬಗ್ಗೆ ಅವರು ದೂರು ನೀಡಿದ್ದರು. ಹೆಚ್.ಎಸ್.ಆರ್.ಲೇಔಟ್ ಪೊಲೀಸ್ ಠಾಣೆಯಲ್ಲಿ ಸರ ಅಪಹರಣ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು, ಬಾತೀಧಾರರಿಂದ ಖಚಿತ ಮಾಹಿತಿಯನ್ನು ಕಲೆ ಹಾಕಿ ವಿವೇಕನಗರದ ನೀಲಸಂದ್ರದಲ್ಲಿ ದರೋಡೆಕೋರನನ್ನು ವಶಕ್ಕೆ ಪಡೆದುಕೊಳ್ಳಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಈ ಪ್ರಕರಣದಲ್ಲಿ ಅಪಹರಣ ಮಾಡಿದ್ದ ಚಿನ್ನದ ಮಾಂಗಲ್ಯ ಸರವನ್ನು ನೀಲಸಂದ್ರದ ಜ್ಯೂವೆಲರಿ ಅಂಗಡಿಯಲ್ಲಿ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದು ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮೊಹಮದ್ ಸುಜೀತ್ ಅವರ ಮಾರ್ಗದರ್ಶನದಲ್ಲಿ, ಸಹಾಯಕ ಪೊಲೀಸ್ ಆಯುಕ್ತರಾದ ವಾಸುದೇವ್‌ನೇತೃತ್ವದಲ್ಲಿ ಹೆಚ್.ಎಸ್.ಆರ್.ಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್‌್ಸಪೆಕ್ಟರ್ ಹರೀಶ್ ಕುಮಾರ್ ಅವರ ಸಾರಥ್ಯದಲ್ಲಿ ಠಾಣೆಯ ಅಧಿಕಾರಿಗಳು,ಸಿಬ್ಬಂದಿ ಪ್ರಕರವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೈಕ್‌ನಿಂದ ಬಿದ್ದ ಬಾಲಕಿ ಸಾವು :
ಬೆಂಗಳೂರು,ಜ.15-ತಂದೆಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ಆರು ವರ್ಷದ ಬಾಲಕಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ವಿಜಯನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ ಲೇಔಟ್ ನಿವಾಸಿ ಪರಮೇಶ್ವರ್ ಎಂಬುವವರ ಪುತ್ರಿ ಹಾರಿಕಾ (6) ಮೃತಪಟ್ಟ ಬಾಲಕಿ.
ಪರಮೇಶ್ವರ್ ಅವರು ನಿನ್ನೆ ಸಂಜೆ 6 ಗಂಟೆ ಸುಮಾರಿನಲ್ಲಿ ಮಗಳು ಹಾರಿಕಾಳನ್ನು ಬೈಕ್‌ನ ಹಿಂಬದಿ ಕೂರಿಸಿಕೊಂಡು ವೆಸ್‌್ಟಆ್ ಕಾರ್ಡ್ ರಸ್ತೆಯ ಶಿವನಹಳ್ಳಿ ಡೌನ್ ರ್ಯಾಂಪ್ ಬಳಿ ಹೋಗುತ್ತಿದ್ದಾಗ ಬ್ರೇಕ್ ಹಾಕಿದ್ದಾರೆ.ಆ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬಾಲಕಿ ಗಂಭೀರ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದರಾದರೂ ರಾತ್ರಿ 9 ಗಂಟೆ ಸುಮಾರಿನಲ್ಲಿ ಚಿಕಿತ್ಸೆ ಲಿಸದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ವಿಜಯನಗರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಕಿ ಅವಘಡ : ಹೊತ್ತಿ ಉರಿದ ಶೆಡ್‌ಗಳು
ಬೆಂಗಳೂರು,ಜ.15-ಕಸಕ್ಕೆ ಬೆಂಕಿ ಹೊತ್ತಿಕೊಂಡು ಪಕ್ಕದಲ್ಲೇ ಸಂಗ್ರಹವಾಗಿದ್ದ ಗುಜರಿಗೆ ತಾಗಿದ ಕಿಡಿ ಹದಿನೈದು ಶೆಡ್‌ಗಳಿಗೂ ಹರಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಸದ ಡಂಪಿಂಗ್ ಯಾರ್ಡ್ ಇದೆ. ಇಂದು ಬೆಳಗಿನ ಜಾವ 3.15ರ ಸುಮಾರಿನಲ್ಲಿ ಕಸಕ್ಕೆ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿಯ ಕಿಡಿ ಪಕ್ಕದಲ್ಲೇ ಸಂಗ್ರಹಿಸಿಡಲಾಗಿದ ಗುಜರಿ ವಸ್ತುಗಳಿಗೂ ತಾಗಿ ಬೆಂಕಿಯ ತೀವ್ರತೆ ಹೆಚ್ಚಾಗಿ ಪಕ್ಕದ ಶೆಡ್‌ಗಳು ಹೊತ್ತಿಕೊಂಡಿವೆ.
ಸುದ್ದಿ ತಿಳಿದು ಅಗ್ನಿ ಶಾಮಕ ಸಿಬ್ಬಂದಿ ನಾಲ್ಕು ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಸುಮಾರು 3ಗಂಟೆಗಳಿಗೂ ಹೆಚ್ಚು ಕಾಲ ಹರಸಾಹಸದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿಯಿಂದಾಗಿ ಹದಿನೈದು ಶೆಡ್‌ಗಳು ಸುಟ್ಟು ಹೋಗಿವೆ ಅದೃಷ್ಟವಶಾತ್ ಶೆಡ್‌ಗಳಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಶೆಡ್‌ನಲ್ಲಿ ವಾಸವಾಗಿರುವವರು ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದಾರೆ.ಈ ಪೈಕಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆಯೇ ಎಂಬ ಬಗ್ಗೆ ಬೇಗೂರು ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆೆ.ಮೂರು ತಿಂಗಳ ಹಿಂದೆ ಇದೇ ಜಾಗದಲ್ಲಿ ಬೆಂಕಿ ಅವಘಡ ಸಂಭವಿಸಿ 50 ಗುಡಿಸಲುಗಳು ಭಸವಾಗಿದ್ದವು. ಹಾಗಾಗಿ ಗುಡಿಸಲಿನಲ್ಲಿದ್ದ ನಿವಾಸಿಗಳು ಬೇರೆಡೆ ನೆಲೆಸಿದ್ದಾರೆ.ಇದೀಗ ಮತ್ತೆ ಈ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿವೆ.ಬೇಗೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕೊಳದಲ್ಲಿ ಬಾಲಕನ ಮೃತದೇಹ ಪತ್ತೆ :
ಮಂಗಳೂರು ,ಜ.15- ಧಾರ್ಮಿಕ ವಿಽವಿಧಾನಗಳಿಗೆ ಹಾಜರಾಗಲು ಮನೆಯಿಂದ ಹೊರಟಿದ್ದ ಬಾಲಕನ ಶವ ಕೊಳದಲ್ಲಿ ಪತ್ತೆಯಾಗಿ ಸ್ಥಳೀಯರು ಆತಂಕಗೊಂಡಿದ್ದಾರೆ.ಮೃತ ಬಾಲಕನನ್ನು ಸಂಬೋಲ್ಯ ಬರಮೇಲು ನಿವಾಸಿ ಸುಮಂತ್ (15)ಎಂದು ಗುರುತಿಸಲಾಗಿದೆ.ಈತ ಗೇರುಕಟ್ಟೆ ಪ್ರೌಢಶಾಲೆಯಲ್ಲಿ 9 ನೇ ತರಗತಿಯ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.ಸುಮಂತ್ ಇತರ ಇಬ್ಬರು ಹುಡುಗರೊಂದಿಗೆ ದೇವಸ್ಥಾನದಲ್ಲಿ ಧನುರ್ ಪೂಜೆಗೆ ಹಾಜರಾಗಲು ಬೆಳಿಗ್ಗೆ 4 ಗಂಟೆ ಸುಮಾರಿಗೆ ತನ್ನ ಮನೆಯಿಂದ ಹೊರಟಿದ್ದ.
ಸುಮಂತ್ ಮನೆಯಿಂದ ಹೊರ ಬರಲು ವಿಳಂಬವಾದ ಕಾರಣ, ಇತರ ಹುಡುಗರು ಸ್ವಲ್ಪ ಸಮಯ ಕಾಯು ತ್ತಿದ್ದರು, ಆದರೆ ಅವರು ಸ್ಥಳಕ್ಕೆ ತಲುಪಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಹುಡುಗರು ಸುಮಂತ್ ಅವರ ಕುಟುಂಬವನ್ನು ಸಂಪರ್ಕಿಸಿದಾಗ, ಅವರು ಈಗಾಗಲೇ ಮನೆಯಿಂದ ಹೊರಟಿದ್ದಾರೆ ಎಂದು ಅವರಿಗೆ ತಿಳಿಸಲಾಯಿತು. ಬಾಲಕ ದೇವಸ್ಥಾನಕ್ಕೆ ತಲುಪಿಲ್ಲ ಎಂಬುದು ಸ್ಪಷ್ಟವಾದಾಗ, ಕುಟುಂಬವು ನಿವಾಸಿಗಳು ಮತ್ತು ಅಽಕಾರಿಗಳಿಗೆ ಮಾಹಿತಿ ನೀಡಿತು.
ಸುಮಂತ್ ಎಲ್ಲಿ ಹೋಗಿದ್ದಾನೆಂದು ತಿಳಿಯದೆ ಸಾಮಾನ್ಯವಾಗಿ ಹೋಗುವ ಮಾರ್ಗದ ಕೊಳದ ಬಳಿ ರಕ್ತದ ಕಲೆಗಳನ್ನು ಸ್ಥಳೀಯರು ನೋಡಿ ಪೊಲೀಸ್‌ರಿಗೆ ಮಾಹಿತಿ ನೀಡಿದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅರುಣ್ ತಿಳಿಸಿದ್ದಾರೆ.ಅರಣ್ಯ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯನ್ನು ಒಳಗೊಂಡ ಶೋಧ ಕಾರ್ಯಾಚರಣೆಗೆ ಶವ ಪತ್ತೆಯಾಗಿ ಹೊರತೆಗೆಯಲಾಗಿದೆ.
ಬೆಳಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಽಕಾರಿ ತಿಳಿಸಿದ್ದಾರೆ.
