ಬೆಂಗಳೂರು,ಜ.28- ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕೊಂಡು ಸರ ಅಪಹರಣ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್ 6 ಮಂದಿ ಆರೋಪಿಗಳನ್ನು ಕೊಡಿಗೇಹಳ್ಳಿ
ಠಾಣೆ ಪೊಲೀಸರು ಬಂಧಿಸಿ 28.50 ಲಕ್ಷ ರೂ. ಮೌಲ್ಯದ 450 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಸಿರಾಜ್ ಆಲಿ, ಸಾಧಿಕ್ ರಫೀಕ್, ಅಬ್ಬಾಸ್ ಆಲಿ, ತಬ್ರೇಜ್ ಆಲಿ, ಅಬಿರಾಂ ಮತ್ತು ಮಾದುಷಾ ಬಂಧಿತ ಆರೋಪಿಗಳು.
ಕೊಡಿಗೇಹಳ್ಳಿ ಮುಖ್ಯರಸ್ತೆಯ ನಿವಾಸಿಯೊಬ್ಬರು ಕುಟುಂಬದೊಂದಿಗೆ ರಾಜಸ್ತಾನಕ್ಕೆ ಹೋಗಿದ್ದಾಗ ಕಳ್ಳರು ಇವರ ಮನೆಯ ಮುಂಬಾಗಿಲನ್ನು ಒಡೆದು ಒಳನುಗ್ಗಿ ಕೊಠಡಿಯ ಬೀರುವನ್ನು ಮೀಟಿ ಅದರಲ್ಲಿದ್ದ ವಸ್ತುಗಳನ್ನೆಲ್ಲಾ ಚೆಲ್ಲಾಡಿ ಕೈಗೆ ಸಿಕ್ಕಿದ 30 ಗ್ರಾಂ ಚಿನ್ನಾಭರಣ ಹಾಗೂ 2 ಬೆಳ್ಳಿಯ ದೀಪಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಈ ಕುಟುಂಬ ಮನೆಗೆ ವಾಪಸ್ ಆದಾಗ ಕಳ್ಳತನ ನಡೆದಿರುವನ್ನು ಗಮನಿಸಿ ತಕ್ಷಣ ಕೊಡಿಗೇಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು.
ಇದೇ ವ್ಯಾಪ್ತಿಯ ಸಹಕಾರ ನಗರದಲ್ಲಿ ಮಹಿಳೆಯೊಬ್ಬರು ದೇವಸ್ಥಾನಕ್ಕೆ ಹೋಗಿ ವಾಪಸ್ ಮನೆಗೆ ಹೋಗುತ್ತಿದ್ದಾಗ 17ನೇ ಮುಖ್ಯರಸ್ತೆಯಲ್ಲಿ ಇಬ್ಬರು ಸರಗಳ್ಳರು ದ್ವಿ-ಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಸಮಯ ಸಾಧಿಸಿ ಮಹಿಳೆಯ 30 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಎರಡು ಪ್ರಕರಣಗಳನ್ನೂ ಗಂಭಿರವಾಗಿ ಪರಿಗಣಿಸಿ ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕಿ ಕೋಲಾರದ ಚಿಂತಾಮಣಿ ಸರ್ಕಲ್ ಬಳಿ ಒಬ್ಬನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಸರ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಹೇಳಿದ್ದಾನೆ.
ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದಾಗ ಈ ಪ್ರಕರಣದಲ್ಲಿ ಹಾಗೂ ಇತರೆ ಐವರು ಸಹಚರರೊಡನೆ ಸೇರಿ ಮನೆ ಕಳವು ಮಾಡಿರುವುದಾಗಿ ಮತ್ತು ಐವರು ಸಹಚರರ ಬಗ್ಗೆ ಮಾಹಿತಿಯನ್ನು ನೀಡಿದ್ದಾನೆ.
ಈತನ ಮಾಹಿತಿ ಮೇರೆಗೆ ಆಂಧ್ರಪ್ರದೇಶದ ಅನ್ನಮಯಿ ಜಿಲ್ಲೆಯ ಕಲ್ಕಿರಿ ಮಂಡಲದ ಜ್ಯೂವೆಲರಿ ಅಂಗಡಿಯೊಂದರಲ್ಲಿ ಮಾರಾಟ ಮಾಡಿದ್ದ 145 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತನಿಖೆ ಮುಂದುವರೆಸಿದ ಪೊಲೀಸರು ಆರೋಪಿ ನೀಡಿದ ಮಾಹಿತಿ ಮೇರೆಗೆ ಬೆಳ್ಳಾವಿ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಒಬ್ಬನನ್ನು ಹಾಗೂ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣದವೊಂದರಲ್ಲಿ ಭಾಗಿಯಾಗಿದ್ದ ಮತ್ತೊಬ್ಬನನ್ನು ತುಮಕೂರು ಜಿಲ್ಲಾ ಕಾರಾಗೃಹದಿಂದ ವಶಕ್ಕೆ ಪಡೆದು ಸುದೀರ್ಘವಾಗಿ ವಿಚಾರಣೆ ಮಾಡಿದಾಗ ಸರ ಅಪಹರಣ ಮತ್ತು ಮನೆಗಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ತಿಳಿಸಿದ್ದಾರೆ.
ಆರೋಪಿಗಳು ಕಳವು ಮಾಡಿದ ಚಿನ್ನಾಭರಣಗಳನ್ನು ಅಂಧ್ರಪ್ರದೇಶದ ಅನ್ನಮಯಿ ಜಿಲ್ಲೆಯ ಮದನಪಲ್ಲಿರುವ ಒಂದು ಜ್ಯೂವೆಲರಿ ಅಂಗಡಿಯೊಂದರಲ್ಲಿ 127 ಗ್ರಾಂ ಚಿನ್ನಾಭರಣವನ್ನು ಮಾರಾಟ ಮಾಡಿರುವುದಾಗಿ ತಿಳಿಸಿದ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ತನಿಖೆಯನ್ನು ಮುಂದುವರೆಸಿ ಹಿಂದೂಪುರ ಟೌನ್ ಮಡಕ್ಪೇಟೆಯಲ್ಲಿ ಮತ್ತೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಆತ ನೀಡಿದ ಮಾಹಿತಿ ಮೇರೆಗೆ ಸ್ನೇಹತನಿಗೆ ನೀಡಿದ್ದ 178 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ತನಿಖೆಯನ್ನು ಮುಂದುವರೆಸಿ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಗದಗ್ನ ಠಾಂಕೂರ್ ಕೋಟೆಯಲ್ಲಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಿಳಿಸಿದ್ದಾರೆ. ಆರೋಪಿಗಳ ಬಂಧನದಿಂದ ಕೊಡಿಗೇಹಳ್ಳಿ ಪೊಲೀಸ್ ಠಾಣೆಯ 5 ಮನೆ ಕಳವು ಪ್ರಕರಣಗಳು, 1 ಸರ ಅಪಹರಣ ಪ್ರಕರಣ, ಬಾಗಲೂರು ಅಮೃತಹಳ್ಳಿ, ಸಂಜಯ್ನಗರ, ಆರ್.ಟಿ.ನಗರ , ವೈಟ್ಫೀಲ್್ಡ , ಕಾಡುಗೋಡಿ ಹಾಗೂ ವರ್ತೂರು ಪೊಲೀಸ್ ಠಾಣೆಯ ತಲಾ 1 ಪ್ರಕರಣ ಸೇರಿ ಒಟ್ಟು 13 ಪ್ರಕರಣಗಳು ಪತ್ತೆಯಾಗಿರುತ್ತವೆ.
ಇನ್್ಸಪೆಕ್ಟರ್ ಮಹೇಶ್ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿದೆ.