ಹೊಸ ವರ್ಷಾಚರಣೆಗೆ ಕಟ್ಟೆಚ್ಚರ: 10,000 ಪೊಲೀಸರ ಕಣ್ಗಾವಲು

Social Share

ಬೆಂಗಳೂರು, ಡಿ.29- ನಗರದಲ್ಲಿ ಹೊಸ ವರ್ಷಾಚರಣೆಯ ಬಂದೋಬಸ್ತ್‍ಗಾಗಿ ಅಧಿಕಾರಿಗಳೂ ಸೇರಿದಂತೆ 10 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದಿಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷ ಸಂಭ್ರಮದ ಸಂದರ್ಭದಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯನ್ನಾಗಿ ಪರಿಗಣಿಸಿ ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದರು.

ಇಬ್ಬರು ಹೆಚ್ಚುವರಿ ಪೊಲೀಸರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು, 15 ಮಂದಿ ಡಿಸಿಪಿಗಳು, 45 ಮಂದಿ ಎಸಿಪಿಗಳು, 160 ಮಂದಿ ಇನ್ಸ್‍ಪೆಕ್ಟರ್‍ಗಳು, 600 ಮಂದಿ ಸಬ್‍ಇನ್ಸ್‍ಪೆಕ್ಟರ್‍ಗಳು, 800 ಮಂದಿ ಎಎಸ್‍ಐ, 1800 ಮಂದಿ ಹೆಡ್‍ಕಾನ್ಸ್‍ಸ್ಟೇಬಲ್ ಹಾಗೂ 5200 ಮಂದಿ ಕಾನ್ಸ್‍ಸ್ಟೇಬಲ್‍ಗಳೂ ಸೇರಿದಂತೆ 10 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಬಂದೋಬಸ್ತ್‍ಗೆ ನಿಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು.

BIG NEWS: ಕಳಸಾ-ಬಂಡೂರಿ ನಾಲಾ ಯೋಜನೆಯ ಕೇಂದ್ರ ಗ್ರೀನ್ ಸಿಗ್ನಲ್

ಬಂದೋಬಸ್ತ್ ಕರ್ತವ್ಯಕ್ಕೆ ನಗರದ ಅಧಿಕಾರಿ ಮತ್ತು ಸಿಬ್ಬಂದಿಗಳ ಜೊತೆಗೆ ಹೊರ ಜಿಲ್ಲೆಗಳಿಂದ ಹಾಗೂ ತರಬೇತಿಯಲ್ಲಿರುವ 20 ಮಂದಿ ಎಸಿಪಿಗಳು, 50 ಮಂದಿ ಇನ್ಸ್‍ಪೆಕ್ಟರ್, 50 ಮಂದಿ ಸಬ್‍ಇನ್ಸ್‍ಪೆಕ್ಟರ್‍ಗಳು, 1300 ಸಿಬ್ಬಂದಿಗಳ ಜೊತೆಗೆ 52 ಕೆಎಸ್‍ಆರ್‍ಪಿ, 25 ಸಿಎಆರ್ ತುಕಡಿಗಳನ್ನು ಆಯಾ ಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ.

ವಿಶೇಷವಾಗಿ ಕೇಂದ್ರ ವಿಭಾಗದ ಬ್ರಿಗೇಡ್ ರಸ್ತೆ, ಎಂ.ಜಿ. ರಸ್ತೆ, ರಿಚ್ಮಂಡ್ ರಸ್ತೆ, ರೆಸಿಡೆನ್ಸಿ ರಸ್ತೆ ವ್ಯಾಪ್ತಿಯಲ್ಲಿ ನಾಲ್ಕು ಮಂದಿ ಡಿಸಿಪಿಗಳು, 10 ಮಂದಿ ಎಸಿಪಿ, 30 ಮಂದಿ ಪೊಲೀಸ್ ಇನ್ಸ್‍ಪೆಕ್ಟರ್ ಸೇರಿದಂತೆ ಒಟ್ಟು 3000 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಅದೇ ರೀತಿ ಕೋರಮಂಗಲ, ಇಂದಿರಾನಗರ, ವೈಟ್‍ಫೀಲ್ಡ್ ಏರಿಯಾಗಳಲ್ಲಿ ನಾಲ್ವರು ಡಿಸಿಪಿಗಳು, 10 ಮಂದಿ ಎಸಿಪಿಗಳು, 25 ಮಂದಿ ಇನ್ಸ್‍ಪೆಕ್ಟರ್ ಸೇರಿದಂತೆ 2500 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಶಸ್ತ್ರಾಸ್ತ್ರ ನಿಷೇಧ:
ಲೈಸೆನ್ಸ್ ಇದ್ದರೂ ಸಹ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪಾರ್ಟಿಗಳಿಗೆ ಹೋಗುವವರು ಪಿಸ್ತೂಲು, ರಿವಾಲ್ವರ್ ಮುಂತಾದ ಶಾಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಹೋಗುವಂತಿಲ್ಲ ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.

112ಗೆ ಮಾಹಿತಿ ನೀಡಿ:
ಮಾದಕ ವಸ್ತುಗಳ ಸರಬರಾಜು, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು, ಅಕ್ರಮ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಲಭಿಸಿದ್ದಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಯಾವುದಾದರೂ ಚಟುವಟಿಕೆಗಳು ಕಂಡು ಬಂದಲ್ಲಿ ಇಲ್ಲವೇ, ವಾರಸುದಾರರಿಲ್ಲದ ವಸ್ತುಗಳು ಕಂಡು ಬಂದಲ್ಲಿ ತಕ್ಷಣ ಸ್ಥಳೀಯ ಪೊಲೀಸರಿಗಾಗಲೀ ಅಥವಾ ದೂರವಾಣಿ ಸಂಖ್ಯೆ 112ಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

BIG NEWS ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ: ಸಚಿವ ಮಾಧುಸ್ವಾಮಿ

ಬೈನಾಕುಲರ್ ಉಪಕರಣಗಳು:
ಹೆಚ್ಚು ಜನ ಸಂದಣಿ ಇರುವ ಸ್ಥಳಗಳಲ್ಲಿ ಸೂಕ್ತ ಕಣ್ಗಾವಲು ಏರ್ಪಡಿಸಲು ಸಿಬ್ಬಂದಿಗಳಿಗೆ ಗೋಪುರಗಳನ್ನು ನಿರ್ಮಿಸಿದ್ದು, ಅಲ್ಲಿ ನೇಮಕ ಮಾಡುವ ಸಿಬ್ಬಂದಿಗಳಿಗೆ ಬೈನಾಕುಲರ್ ಉಪಕರಣಗಳನ್ನು ಒದಗಿಸಲಾಗಿದೆ.

ಡ್ರೋನ್ ಕ್ಯಾಮೆರಾ:
ಹೆಚ್ಚುವರಿಯಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿರುತ್ತದೆ. ಡಿ. 31ರಂದು ರಾತ್ರಿ 20 ಡ್ರೋನ್ ಕ್ಯಾಮೆರಾಗಳನ್ನು ಕಾರ್ಯಾಚರಣೆಗೊಳಿಸಲಾಗಿದೆ, ಪ್ರಮುಖ ಸ್ಥಳಗಳಲ್ಲಿ ಶ್ವಾನದಳ ಮತ್ತು 10 ಎಎಸ್ ಚೆಕ್ ತಂಡಗಳಿಂದ ತಪಾಸಣೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಒಂದು ಗಂಟೆವೆಗೆ ಅವಕಾಶ:
ಮಧ್ಯ ರಾತ್ರಿ ಒಂದು ಗಂಟೆಯವರೆಗೆ ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಸರ್ಕಾರದ ಅನುಮತಿ ಇದ್ದು, ನಿಗದಿತ ಸಮಯದವರೆಗೆ ಮಾತ್ರ ಸಾರ್ವಜನಿಕರು ಹೊಸ ವರ್ಷಾಚರಣೆ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದರು.

ನ್ಯಾಯಬೆಲೆ ಅಂಗಡಿಗಳಿಗೆ ಡಿಸಿ ಭೇಟಿ

ಒಟ್ಟಾರೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ನಗರದಾದ್ಯಂತ ಕಟ್ಟೆಚ್ಚರ ವಹಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪೊಲೀಸ್ ವ್ಯವಸ್ಥೆಯನ್ನು ಸಜ್ಜಗೊಳಿಸಿದ್ದು, ಸ್ಥಳೀಯ ಅಗತ್ಯಗಳಿಗನುಗುಣವಾಗಿ ಅಕಾರಿ ಮತ್ತು ಸಿಬ್ಬಂದಿಗಳ ಬಂದೋಬಸ್ತ್ ಮಾಡಲಾಗಿದೆ ಎಂದು ಪ್ರತಾಪ್ ರೆಡ್ಡಿ ತಿಳಿಸಿದರು.

Bengaluru Police, issues, guidelines, New Year, celebrations,

Articles You Might Like

Share This Article