ಪೂರ್ವ ವಿಭಾಗ ಪೊಲೀಸರ ಕಾರ್ಯಾಚರಣೆ, 17 ಮಂದಿ ಬಂಧನ ; 50 ಲಕ್ಷ ಮೌಲ್ಯದ 78 ದ್ವಿಚಕ್ರ ವಾಹನ ವಶ

Social Share

ಬೆಂಗಳೂರು, ಜು.30- ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ 17 ಮಂದಿ ಆರೋಪಿಗಳನ್ನು ಬಂಧಿಸಿ ಸುಮಾರು 50 ಲಕ್ಷ ಮೌಲ್ಯದ 78 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪೂರ್ವ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಈ ಪ್ರಕರಣಗಳನ್ನು ಪತ್ತೆ ಹಚ್ಚಲು ಮತ್ತು ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ವಹಿಸುವ ಬಗ್ಗೆ ಸೂಚನೆಗಳನ್ನು ನೀಡಲಾಗಿತ್ತು. ಅದರಂತೆ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ವಾಹನ ಕಳವು ಮಾಡುತ್ತಿದ್ದ ಆರೋಪಿಗಳ ಬಗ್ಗೆ ತಾಂತ್ರಕವಾಗಿ ಮಾಹಿತಿ ಸಂಗ್ರಹಿಸಿ ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ರಾಮಮೂರ್ತಿನಗರ ಪೊಲೀಸ್ ಠಾಣೆ:

ರಾಮಮೂರ್ತಿನಗರ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 5 ಮಂದಿ ಆರೋಪಿಗಳನ್ನು ಬಂಧಿಸಿ ಸುಮಾರು 19 ಲಕ್ಷ ಮೌಲ್ಯದ ವಿವಿಧ
ಕಂಪನಿಗಳ 32 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಬಂಧನದಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 14 ಪ್ರಕರಣಗಳು ಪತ್ತೆಯಾಗಿರುತ್ತವೆ.

ಆರೋಪಿಗಳು ರಾತ್ರಿ ವೇಳೆಯಲ್ಲಿ ಮನೆಗಳ ಬಳಿ ಮತ್ತು ರಸ್ತೆಗಳಲ್ಲಿ ನಿಲ್ಲಿಸಿರುವ ವಾಹನಗಳ ಹ್ಯಾಂಡಲ್ ಲಾಕ್ಗಳನ್ನು ಮುರಿದು ಕಳವು ಮಾಡಿ, ನಂತರ ಆ ವಾಹನಗಳನ್ನು ಆಂದ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರುನಲ್ಲಿ ಮಾರಾಟ ಮಾಡುತ್ತಿದ್ದುದು ವಿಚಾರಣೆಯಿಂದ ತಿಳಿದುಬಂದಿರುತ್ತದೆ.

ಕೆ.ಜಿ ಹಳ್ಳಿ ಪೊಲೀಸ್ ಠಾಣೆ:

ಕೆ.ಜಿ ಹಳ್ಳಿ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4 ಮಂದಿ ಆರೋಪಿಗಳನ್ನು ಬಂಧಿಸಿ ಸುಮಾರು 8 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 21ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಬಂಧನದಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 10 ಪ್ರಕರಣಗಳು ಪತ್ತೆ ಯಾಗಿರುತ್ತವೆ. ಆರೋಪಿಗಳು ರಾತ್ರಿ ವೇಳೆಯಲ್ಲಿ ಮನೆಗಳ ಬಳಿ ಮತ್ತು ರಸ್ತೆಗಳಲ್ಲಿ ನಿಲ್ಲಿಸಿರುವ ವಾಹನಗಳ ಹ್ಯಾಂಡಲ್ ಲಾಕ್ಗಳನ್ನು ಮುರಿದು ಕಳವು ಮಾಡುತ್ತಿದ್ದುದು ವಿಚಾರಣೆಯಿಂದ ತಿಳಿದುಬಂದಿರುತ್ತದೆ.

ಬಾಣಸವಾಡಿ ಪೊಲೀಸ್ ಠಾಣೆ:

ಬಾಣಸವಾಡಿ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4 ಮಂದಿ ಆರೋಪಿಗಳನ್ನು ಬಂಧಿಸಿ ಸುಮಾರು 9 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಬಂಧನದಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 11 ಪ್ರಕರಣಗಳು ಪತ್ತೆಯಾಗಿರುತ್ತವೆ. ಆರೋಪಿಗಳು ಕಳವು ಮಾಡಿದ ವಾಹನಗಳ ಬಿಡಿ ಭಾಗಗಳನ್ನು ಬೇರೆ ವಾಹನಗಳಿಗೆ ಆಳವಡಿಸಿ ಹಣ ಸಂಪಾದನೆ ಮಾಡುತ್ತಿದ್ದು ವಿಚಾರಣೆಯಿಂದ ತಿಳಿದು ಬಂದಿರುತ್ತದೆ.

ಪುಲಕೇಶಿನಗರ ಪೊಲೀಸ್ ಠಾಣೆ: ಪುಲಕೇಶಿನಗರ ಪೊಲೀಸ್ ಠಾಣೆ
ಅಧಿಕಾರಿ ಮತ್ತು ಸಿಬ್ಬಂದಿಗಳು ಕೃತ್ಯ ನಡೆದ ಸ್ಥಳದಲಿ ್ಲ ದೊರೆತ ಸಾಕ್ಷಾಧಾರಗಳ ಆಧಾರದ ಮೇರೆಗೆ ಒಬ್ಬ ಆರೋಪಿಯನ್ನು ಬಂಧಿಸಿ ಸುಮಾರು 3.5 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು ಇದರಿಂದ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 5 ಪ್ರಕರಣಗಳು ಪತ್ತೆಯಾಗಿರುತ್ತವೆ.

ಮನೆಗಳ ಬಳಿ ಮತ್ತು ರಸ್ತೆಗಳಲ್ಲಿ ನಿಲ್ಲಿಸಿರುವ ವಾಹನಗಳ ಹ್ಯಾಂಡಲ್ ಲಾಕ್ಗಳನ್ನು ಮುರಿದು ಕಳವು ಮಾಡುತ್ತಿದ್ದು ನಂತರ ಸದರಿ ವಾಹನಗಳಲ್ಲಿ ಜಾಲಿ ರೈಡ್ ಮಾಡಿ ರಸ್ತೆಗಳಲ್ಲಿ ಅಥವಾ ಮೈದಾನಗಳಲ್ಲಿ ವಾಹನಗಳನ್ನು ಬಿಟ್ಟು ಹೋಗುತ್ತಿದ್ದುದು ವಿಚಾರಣೆಯಿಂದ ತಿಳಿದುಬಂದಿರುತ್ತದೆ.

ಹೆಣ್ಣೂರು ಪೊಲೀಸ್ ಠಾಣೆ:

ಹೆಣ್ಣೂರು ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಒಬ್ಬ ಆರೋಪಿಯನ್ನು ಬಂಧಿಸಿ ಸುಮಾರು 2.5 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು ಇದರಿಂದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 4 ಪ್ರಕರಣಗಳು ಪತ್ತೆಯಾಗಿರುತ್ತವೆ. ಮನೆಗಳ ಬಳಿ ಮತ್ತು ರಸ್ತೆಗಳಲ್ಲಿ ನಿಲ್ಲಿಸಿರುವ ವಾಹನಗಳ ಹ್ಯಾಂಡಲ್ ಲಾಕ್ಗಳನ್ನು ಮುರಿದು ಕಳವು ಮಾಡುತ್ತಿದ್ದು ನಂತರ ಈ ವಾಹನಗಳಲ್ಲಿ ಜಾಲಿ ರೈಡ್ ಮಾಡಿ ರಸ್ತೆಗಳಲ್ಲಿ ಅಥವಾ ಮೈದಾನಗಳಲ್ಲಿ ವಾಹನಗಳನ್ನು ಬಿಟ್ಟು ಹೋಗುತ್ತಿದ್ದುದು ವಿಚಾರಣೆಯಿಂದ ತಿಳಿದುಬಂದಿರುತ್ತದೆ.

ಭಾರತೀನಗರ ಪೊಲೀಸ್ ಠಾಣೆ:

ಭಾರತೀನಗರ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಕೃತ್ಯ ನಡೆದ ¸ ಸ್ಥಳದಲ್ಲಿ ದೊರೆತ ಸಿ.ಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇರೆಗೆ ಒಬ್ಬ ಆರೋಪಿಯನ್ನು ಬಂಧಿಸಿ ಸುಮಾರು 3 ಲಕ್ಷ ಮËಲ್ಯದ ವಿವಿಧ ಕಂಪನಿಗಳ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು ಇದರಿಂದ ಭಾರತೀನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳು ಪತ್ತೆಯಾಗಿರುತ್ತವೆ.

ಹಗಲು ಮತ್ತು ರಾತ್ರಿ ವೇಳೆಯಲ್ಲಿ ರಸ್ತೆಗಳಲ್ಲಿ ನಿಲ್ಲಿಸಿ ಹೋಗಿರುವ ವಾಹನಗಳ ಹ್ಯಾಂಡಲ್ ಲಾಕ್ಗಳನ್ನು ಮುರಿದು ಕಳವು ಮಾಡಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದುದು ವಿಚಾರಣೆಯಿಂದ ತಿಳಿದು ಬಂದಿರುತ್ತದೆ.

ಶಿವಾಜಿನಗರ ಪೊಲೀಸ್ ಠಾಣೆ:

ಶಿವಾಜಿನಗರ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಕೃತ್ಯ ನಡೆದ ಸ್ಥಳದಲ್ಲಿ ದೊರೆತ ಸಿ.ಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇರೆಗೆ ಒಬ್ಬ ಆರೋಪಿಯನ್ನು ಬಂಧಿಸಿ ಸುಮಾರು 1.5 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 3ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು 3 ಪ್ರಕರಣಗಳು ಪತ್ತೆಯಾಗಿರುತ್ತವೆ.

ಹಗಲು ವೇಳೆಯಲ್ಲಿ ರಸ್ತೆಗಳಲ್ಲಿ ನಿಲ್ಲಿಸಿ ಹೋಗಿರುವ ವಾಹನಗಳ ಹ್ಯಾಂಡಲ್ ಲಾಕ್ಗಳನ್ನು ಮುರಿದು ನಂತರ ಈ ವಾಹನಗಳಲ್ಲಿ ಜಾಲಿ ರೈಡ್ ಮಾಡಿ ರಸ್ತೆಗಳಲ್ಲಿ ಅಥವಾ ಮೈದಾನಗಳಲ್ಲಿ ವಾಹನಗಳನ್ನು ಬಿಟ್ಟು ಹೋಗುತ್ತಿದ್ದುದು ವಿಚಾರಣೆಯಿಂದ ತಿಳಿದುಬಂದಿರುತ್ತದೆ.

Articles You Might Like

Share This Article