ಬೆಂಗಳೂರು,ಅ.1- ರಾತ್ರಿಯಿಂದ ಜಿಟಿ ಜಿಟಿ ಎಂದು ಸುರಿಯುತ್ತಿರುವ ಮಳೆ ಇಂದು ಸಂಜೆವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ರಾತ್ರಿಯಿಂದಲೂ ಸುರಿಯುತ್ತಿರುವ ಜಿಟಿಜಿಟಿ ಮಳೆ ಇಂದು ಬೆಳಿಗ್ಗೆ ಕೂಡ ಮುಂದುವರೆದಿದ್ದು ಸಂಜೆವರೆಗೂ ಇರಲಿದೆ ಎಂದು ವರದಿಯಾಗಿದೆ.
ಮುಂದಿನ ಕೆಲ ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಿಂಚು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ, ಹಾಸನ, ತುಮಕೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ.