ಬೆಂಗಳೂರು, ಫೆ, 17- ನಗರದ ಜನರ ಬಹುದಿನದ ಬೇಡಿಕೆಯಾಗಿರುವ 15,767 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿರುವ ಉಪನಗರ ರೈಲು ಯೋಜನೆಯ ಮೊದಲ ಹಂತದ ಕಾಮಗಾರಿಯನ್ನು 2.24-25 ನೇ ಸಾಲಿನಲ್ಲಿ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಬಜೆಟ್‍ನಲ್ಲಿ ಘೋಷಿಸಿದ್ದಾರೆ.
ಮೊದಲ ಹಂತದ ಯೋಜನೆಗೆ ಕೇಂದ್ರ ಸರ್ಕಾರ 1350 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 1 ಸಾವಿರ ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ನಡುವಿನ ಕಾರಿಡಾರ್ -2 ವಯಾ ಡಕ್ಟ್ ಕಾಮಗಾರಿಗಳಿಗೆ 860 ಕೋಟಿ ರೂ. ಮೊತ್ತಕ್ಕೆ ಕಾರ್ಯಾದೇಶ ನೀಡಿದ್ದು ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.
ಆಸಿಡ್ ದಾಳಿ ಸಂತ್ರಸ್ತರಿಗೆ 10 ಸಾವಿರ ಮಾಸಾಶನ
ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 58.19 ಕಿ.ಮೀ ಉದ್ದದ ಮೆಟ್ರೊ ರೈಲು ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪ್ರಸಕ್ತ ವರ್ಷದಲ್ಲಿ 40 ಕಿ.ಮೀ ಉದ್ದದ ಕಾಮಗಾರಿ ಪೂರ್ಣಗೊಳಿಸಲಾಗಲು ತೀರ್ಮಾನಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
16,328 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿರುವ ಮೆಟ್ರೊ ಮೂರನೆ ಹಂತದ ಕಾಮಗಾರಿ ಆರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ದೊರೆತ ಕೂಡಲೆ ಕಾರ್ಯರಂಭ ಮಾಡಲು ಉದ್ದೇಶಿಸಲಾಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.
ಬೊಮ್ಮಾಯಿ ಬಜೆಟ್ – 2023-2024 (Live Updates)
ಬೆಂಗಳೂರು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿತಗೊಳಿಸುವ 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ ಉದ್ದದ ಸೆಟಲೈಟ್ ಟೌನ್ ರಿಂಗ್‍ರೋಡ್ ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೊದನೆ ದೊರೆತಿದ್ದು,ಈ ಯೋಜನೆಯ ಭೂಸ್ವಾನ ಶೇ.30 ರಷ್ಟು ವೆಚ್ಚವನ್ನು ರಾಜ್ಯಸರ್ಕಾರದಿಂದ ಭರಿಸಲಾಗುತ್ತಿದೆ ಎನ್ನುವುದನ್ನು ಬೊಮ್ಮಾಯಿ ಅವರು ಬಜೆಟ್‍ನಲ್ಲಿ ಪ್ರಸ್ತಾಪಿಸಿದ್ದಾರೆ.
Bengaluru, suburban, rail, project,