Monday, February 24, 2025
Homeಬೆಂಗಳೂರುಬೇಸಿಗೆಗೂ ಮುನ್ನವೇ ಧಗಧಗಿಸುತ್ತುದೆ ಬೆಂಗಳೂರು, ಬಿಸಿಲಿನ ಝಳಕ್ಕೆ ಜನ ಸುಸ್ತೋ ಸುತ್ತು

ಬೇಸಿಗೆಗೂ ಮುನ್ನವೇ ಧಗಧಗಿಸುತ್ತುದೆ ಬೆಂಗಳೂರು, ಬಿಸಿಲಿನ ಝಳಕ್ಕೆ ಜನ ಸುಸ್ತೋ ಸುತ್ತು

Bengaluru To See Early Summer? City Records Season's Hottest Day

ಬೆಂಗಳೂರು,ಫೆ.17- ಸಾಮಾನ್ಯವಾಗಿ ಮಾರ್ಚ್‌ನಲ್ಲಿ ಆರಂಭವಾಗುವ ಬಿಸಿಲಿನ ಝಳ ಈ ಬಾರಿ ಫೆಬ್ರವರಿಯಲ್ಲೇ ಶುರುವಾಗಿದ್ದು ಬೆಂಗಳೂರು ಜನರು ತತ್ತರಿಸಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ 32-33 ಡಿಗ್ರಿ ಸೆಲ್ಸಿಯಸ್ ವರೆಗೂ ಉಷ್ಣಾಂಶ ದಾಖಲಾಗುತ್ತಿದೆ.

ಕೇವಲ ಬೆಂಗಳೂರು ಅಷ್ಟೇ ಅಲ್ಲದೇ ಕಲಬುರಗಿಯಲ್ಲಿ 36 ಡಿಗ್ರಿ ಹಾಗೂ ಬಾಗಲಕೋಟೆ, ಧಾರವಾಡ, ಗದಗ, ಕಾರವಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 34.4 ಡಿಗ್ರಿ ಉಷ್ಣಾಂಶ ದಾಖಲಾಗಿದೆ.

ಮುಂದಿನ ಏಳು ದಿನಗಳವರೆಗೆ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ. ಜೊತೆಗೆ ಮುಂದಿನ 48 ಗಂಟೆಯೊಳಗೆ ಒಂದೆರಡು ಡಿಗ್ರಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶದಲ್ಲಿಯೂ ಏರಿಕೆಯಾಗಲಿದೆ ಎಂದು ಎಚ್ಚರಿಸಲಾಗಿದೆ.

ಪ್ರಸ್ತುತ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 18.2 ಡಿಗ್ರಿ ಸೆಲ್ಸಿಯಸ್ ಇದೆ. ಬೆಂಗಳೂರಿನಲ್ಲಿ ಹಗಲಿನ ಹೊತ್ತಿನಲ್ಲಿ ತಾಪಮಾನವು ದೆಹಲಿಗಿಂತಲೂ ಹೆಚ್ಚಾಗಿರುವುದು ಕಂಡುಬಂದಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ರಾಷ್ಟ್ರ ರಾಜಧಾನಿಯಲ್ಲಿ ಇದು 29 ಡಿಗ್ರಿ ಸೆಲ್ಸಿಯಸ್ ಆಗಿದೆ. ಆದಾಗ್ಯೂ, ರಾತ್ರಿ ವೇಳೆ ಬೆಂಗಳೂರಿನಲ್ಲಿ ತಂಪಾದ ವಾತಾವರಣ ಇದೆ. ಸಾಮಾನ್ಯವಾಗಿ ರಾತ್ರಿ ಸುಮಾರು 17 ಡಿಗ್ರಿ ಸೆಲ್ಲಿ ಯಸ್ ತಾಪಮಾನ ಇದೆ. ಇದು ಸಾಮಾನ್ಯಕ್ಕಿಂತ 0.1 ಡಿಗ್ರಿ ಸೆಲ್ಸಿ ಯಸ್ ಕಡಿಮೆಯಾಗಿದೆ.

ಒಟ್ಟಿನಲ್ಲಿ ಬೆಂಗಳೂರಿನಲ್ಲಿ ಬಿಸಿಲಿನ ಝಳ ಜೋರಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES

Latest News