ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಆರ್ಥಿಕ ನೆರವು: ಬೊಮ್ಮಾಯಿ

Social Share

ಬೆಂಗಳೂರು, ನ.21- ನಗರದಲ್ಲಿ ಹೆಚ್ಚುತ್ತಿರುವ ಸಂಚಾರಿ ದಟ್ಟಣೆಯ ಸಮಸ್ಯೆಯನ್ನು ನಿವಾರಿಸಲು ಶೀಘ್ರದಲ್ಲೇ ಅಧಿಕಾರಿಗಳ ವಿಶೇಷ ಸಭೆ ಕರೆದು ಇದಕ್ಕೆ ಅಗತ್ಯವಿರುವ ಆರ್ಥಿಕ ನೆರವು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೊಮ್ಮನಹಳ್ಳಿ ಸಮೀಪದ ಸಿಂಗಸಂದ್ರ ಬಳಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ವಾಣಿಜ್ಯ ಸಂಕಿರ್ಣ ಕಟ್ಟಡದ ಶಂಕು ಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಸಂಚಾರಿ ದಟ್ಟಣೆ ಹೆಚ್ಚಾಗುತ್ತಲೇ ಇದೆ. ಇದು ದೊಡ್ಡ ಸಮಸ್ಯೆಯಾಗಿಯೂ ಪರಿಣಮಿಸಿದೆ. ಹೀಗಾಗಿ ಸಮಸ್ಯೆಯನ್ನು ಪರಿಹರಿಸಲು ಹಿರಿಯ ಅಧಿಕಾರಿಗಳ ವಿಶೇಷ ಸಭೆಯನ್ನು ಕರೆಯಲಾಗುವುದು.

ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ

ಸಂಚಾರಿ ದಟ್ಟಣೆಗೆ ಅಗತ್ಯವಿರುವ ಹಣವನ್ನು ಸಹ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದೆ. ನಿರ್ಭಯ ಯೋಜನೆಯಡಿ ನಗರಾದ್ಯಂತ 7 ಸಾವಿರ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಸರ್ಕಾರ ತೀರ್ಮಾನಿಸಿದೆ.
ಪ್ರಸ್ತುತ ಈ ತಿಂಗಳಿನಲ್ಲೇ 3 ಸಾವಿರ ಕ್ಯಾಮೆರಾಗಳನ್ನು ಅಳವಡಿಸಲಿದ್ದೇವೆ. ಇದರಿಂದ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಕಡಿವಾಣ ಬೀಳಲಿದೆ ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ದೆಹಲಿ ಹೊರತುಪಡಿಸಿದರೆ ಬೆಂಗಳೂರಿಗೆ ಪ್ರತಿದಿನ ದೇಶ-ವಿದೇಶಗಳಿಂದ ಹೆಚ್ಚಿನ ಜನರು ವ್ಯಾಪಾರ ವಹಿವಾಟಿಗೆ ಬಂದು ಹೋಗುತ್ತಾರೆ. ಅಂದಾಜು 5 ಸಾವಿರ ವಾಹನಗಳು ನೊಂದಣಿಯಾಗುತ್ತವೆ.
ಆರ್ಥಿಕವಾಗಿ ಬೆಳೆಯುತ್ತಿರುವ ಈ ನಗರಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ಮಂಗಳೂರು ಸ್ಪೋಟದ ರುವಾರಿ ಶಾರೀಕ್‍ಗೆ ಐಸಿಸ್ ಲಿಂಕ್

ನಿಯಾರ್ಕ್, ಟೋಕಿಯೋ, ಲಂಡನ್ ನಗರದಲ್ಲಿ ಅತಿ ಹೆಚ್ಚು ಜನದಟ್ಟಣೆ ಇರುವ ನಗರಗಳಾಗಿವೆ. ಅದೇ ರೀತಿ ಬೆಂಗಳೂರಿನಲ್ಲೂ ಅತಿ ಜನಸಂದ್ರತೆ ಇದೆ ಎಂದರು. ಬೆಂಗಳೂರಿನಲ್ಲಿ ಜನಸಂದಣಿ ಇರುವ 12 ಕಡೆ ಹೊಸದಾಗಿ ಕಾರಿಡಾರ್ ಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಮಳೆಗಾಲ ಮುಗಿದ ಬಳಿಕ ರಸ್ತೆಗಳ ಅಗಲೀಕರಣ, ಡಾಂಬರೀಕರಣ ಪ್ರಾರಂಭವಾಗಲಿದೆ. ಸರ್ಕಾರ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಬದ್ಧವಾಗಿದೆ ಎಂದು ಹೇಳಿದರು.

ಭಯೋತ್ಪಾದನೆ ಕೃತ್ಯ ಎಸಗುವವರು ಯಾವುದೇ ಜಾತಿ, ಧರ್ಮರಾಗಿದ್ದರೂ ಎನ್‍ಕೌಂಟರ್ ಮಾಡಿ : ಈಶ್ವರಪ್ಪ

ಹಿಂದಿನ ಸರ್ಕಾರಗಳು ನಗರಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಗಮನಹರಿಸಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಇದಕ್ಕೆ ಹೆಚ್ಚಿನ ಗಮನಕೊಟ್ಟಿದೆ ಎಂದು ತಿಳಿಸಿದರು. ಬಿಬಿಎಂಪಿ ಆಸ್ತಿಗಳನ್ನು ಸಂರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯ. ಹಿಂದಿನ ಸರ್ಕಾರಗಳು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದವು. ನಮ್ಮ ಸರ್ಕಾರ ಎಲ್ಲ ಕಡೆ ಹೆಚ್ಚಿನ ಗಮನ ಕೊಡಲಿದೆ ಎಂದರು.

Bengaluru, traffic, control, CM Bommai,

Articles You Might Like

Share This Article