Thursday, November 21, 2024
Homeಬೆಂಗಳೂರುಸಂಚಾರ ನಿಯಮ ಉಲ್ಲಂಘನೆ: 600 ಪ್ರಕರಣ ದಾಖಲು 3.8 ಲಕ್ಷ ರೂ. ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ: 600 ಪ್ರಕರಣ ದಾಖಲು 3.8 ಲಕ್ಷ ರೂ. ದಂಡ ಸಂಗ್ರಹ

ಬೆಂಗಳೂರು, ಸೆ.26-ಪೂರ್ವ ವಿಭಾಗದ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರು ಮತ್ತು ಚಾಲಕರ ವಿರುದ್ಧ 600ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ 3.8 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.
ಫುಟ್ಪಾತ್‌ ಪಾರ್ಕಿಂಗ್‌, ನೋ ಪಾರ್ಕಿಂಗ್‌, ನೋ ಎಂಟ್ರಿ, ಅತಿವೇಗದ ಚಾಲನೆ, ಹೆಲೆಟ್‌ ಧರಿಸದೆ ವಾಹನ ಚಾಲನೆ, ತ್ರಿಬಲ್‌ ರೈಡಿಂಗ್‌ ಹಾಗೂ ಚಾಲನೆ ವೇಳೆ ಮೊಬೈಲ್‌ ಬಳಕೆ ಸೇರಿದಂತೆ ಇನ್ನಿತರ ಸಂಚಾರಿ ನಿಯಮ ಉಲ್ಲಂಘನೆಗಳಿಗೆ ಸಂಬಂಧ ಪಟ್ಟಂತೆ 616 ಪ್ರಕರಣಗಳನ್ನು ದಾಖಲಾಗಿವೆ.

ವಾಹನ ಸವಾರರು, ಚಾಲಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಇದೇ ವೇಳೆ ಅರಿವು ಮೂಡಿಸಲಾಯಿತು.

ಮುಂದಿನ ದಿನ ಗಳಲ್ಲಿಯೂ ಸಹ ವಿಶೇಷ ಕಾರ್ಯಾಚರಣೆಯನ್ನು ಮುಂದುವರೆಸ ಲಾಗುವು ದು ಎಂದು ಸಂಚಾರ ಪೂರ್ವ ವಿಭಾಗದ ಉಪಪೊಲೀಸ್‌‍ ಆಯುಕ್ತರಾದ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News