“ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಸಮೀಕ್ಷೆ ಯಾವುದೇ ಸಂಸ್ಥೆಗೆ ಅನುಮತಿ ನೀಡಿಲ್ಲ”

Social Share

ಬೆಂಗಳೂರು,ನ.17-ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಸಮೀಕ್ಷೆ ನಡೆಸಲು ಯಾವುದೇ ಸಂಸ್ಥೆಗೆ ಅನುಮತಿ ನೀಡಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಪಷ್ಟನೆ ನೀಡಿದ್ಧಾರೆ.

ಕಾಂಗ್ರೆಸ್ ನಾಯಕರು ಇಂದು ಬೆಳಿಗ್ಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಆರೋಪ ಮಾಡಿದ ಬೆನ್ನಲ್ಲೆ ಚುನಾವಣಾ ಆಯೋಗ ಪತ್ರಿಕಾ ಹೇಳಿಕೆ ನೀಡಿ ನಾಲ್ಕು ಅಂಶಗಳ ಸ್ಪಷ್ಟನೆ ನೀಡಿದೆ.

ಬಿಬಿಎಂಪಿ ಜಿಲ್ಲಾ ಚುನಾವಣಾಧಿಕಾರಿ ಅವರು, ಯಾವುದೇ ಸಂಸ್ಥೆಗೆ ಸಮೀಕ್ಷೆ ನಡೆಸಲು ಅನುಮತಿ ನೀಡಿರುವುದಿಲ್ಲ. ಸರ್ಕಾರೇತರ ಸಂಸ್ಥೆ ಚುಲುಮೆ ರವರಿಗೆ ಮತದಾರರ ಜಾಗೃತಿ ಅಭಿಯಾನದ ಅರಿವು ಮೂಡಿಸಲು ನೀಡಿದ್ದ ಅನುಮತಿಯನ್ನು ದೂರು ಬಂದ ಕೂಡಲೇ ಬಿಬಿಎಂಪಿ ಚುನಾವಣಾಧಿಕಾರಿ ಅವರು ರದ್ದುಪಡಿಸಿದ್ದಾರೆ ಎಂದು ತಿಳಿಸಲಾಗಿದೆ.

ಬೂತ್ ಮಟ್ಟದ ಅಧಿಕಾರಿ ಗುರುತಿನಚೀಟಿ ದುರುಪಯೋಗದ ಸಂಬಂಧ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾ„ಕಾರಿ ಅವರು, ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಚುನಾವಣಾ ನಿಯಮಗಳನ್ನು ಉಲ್ಲಂಸಿರುವ ಬಗ್ಗೆ ತನಿಖೆ ನಡೆಸಿ, ಉಲ್ಲಂಘನೆ ಪ್ರಕರಣ ಕಂಡುಬಂದರೆ ನಿಯಮಾನುಸಾರ ಕ್ರಮ ಜರುಗಿಸಲು ಬಿಬಿಎಂಪಿ ಜಿಲ್ಲಾ ಚುನಾವಣಾ„ಕಾರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

Articles You Might Like

Share This Article