Sunday, November 24, 2024
Homeರಾಜ್ಯBREAKING: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಐಇಡಿ ಸ್ಫೋಟ..!

BREAKING: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಐಇಡಿ ಸ್ಫೋಟ..!

ಬೆಂಗಳೂರು, ಮಾ.1- ನಗರದ ಪ್ರಖ್ಯಾತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿ ಘಟನೆಯಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಸ್ಪೋಟಗೊಂಡ ಪರಿಣಾಮ ಕೆಫೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು, ಗ್ರಾಹಕರು ಕೆಫೆಯಿಂದ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನೆಯಲ್ಲಿ ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣವೇನೆಂಬುದು ನಿಗೂಢವಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಐಇಡಿ ಬಳಕೆ ಶಂಕೆ :

ನಗರದ ಕುಂದಲಹಳ್ಳಿಯ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಸುಧಾರಿತ ಸ್ಪೋಟಕ ಸಾಧನ (ಐಇಡಿ) ಬಳಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೆಫೆಯಲ್ಲಿನ ಕೈ ತೊಳೆಯುವ ವಾಷ್‍ಬೇಸಿನ್ ಬಳಿ ಸ್ಪೋಟಕಗಳಿದ್ದ ಬ್ಯಾಗನ್ನು ಇಟ್ಟು ಸ್ಪೋಟಿಸಲಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಪೋಟದಿಂದ ಒಟ್ಟು 9 ಮಂದಿ ಗಾಯಗೊಂಡಿದ್ದು, ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳದಲ್ಲಿ ಸಿಕ್ಕಿರುವ ಸ್ಪೋಟದ ಅವಶೇಷಗಳನ್ನು ಪೊಲೀಸರು ಸಂಗ್ರಹಿಸಿ, ಪರಿಶೀಲಿಸಿ, ಹೆಚ್ಚಿನ ಮಾಹಿತಿಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಕೆಫೆಗೆ ಎನ್‍ಐಎ ಹಾಗೂ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ , ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾದ ಆಲೋಕ್ ಮೋಹನ್ ಅವರು ಭೇಟಿಪರಿಶೀಲಿಸಿದ್ದಾರೆ.

More Updates Awaiting…

RELATED ARTICLES

Latest News