ಚಿಕ್ಕಮಗಳೂರು, ಜು.8– ಭಾರೀ ಮಳೆಯಿಂದಾಗಿ ಭದ್ರಾ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದು, ಭದ್ರತಾ ದೃಷ್ಟಿಯಿಂದ ನದಿಪಾತ್ರದ ಜನತೆಗೆ ಸುರಕ್ಷತೆಯಿಂದಿರುವಂತೆ ಎಚ್ಚರಿಕೆ ನೀಡಲಾಗಿದೆ.
ಜಲಾಶಯದಲ್ಲಿ ಒಳಹರಿವಿನ ಪ್ರಮಾಣ 20000-25000 ಕ್ಯೂಸೆಕ್ ಇದ್ದು, ಯಾವ ಸಮಯದಲ್ಲಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಸ್ಟೀಲ್ ವೇ ಗೇಟ್ ಮುಖಾಂತರ ನದಿಗೆ ಬಿಡಲಾಗುವುದು.
ಅಚ್ಚುಕಟ್ಟು ವ್ಯಾಪ್ತಿಯ ರೈತರು ಜಲಾಶಯದಲ್ಲಿ ನೀರು ಸಂಗ್ರಹಣೆ ಮಾಡದೇ, ನದಿಗೆ ನೀರು ಬಿಡಲಾಗುತ್ತಿದೆ ಎಂದು ಕಚೇರಿಗೆ ಕರೆ ಮಾಡುತ್ತಿದ್ದಾರೆ. ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರಿನ ಸಂಗ್ರಹಣೆ ಕುರಿತು ನಿಯಮ ಪಾಲನೆ ಮಾಡಲಾಗುತ್ತಿದೆ.
ನಿಯಮ ಪ್ರಕಾರ ಜಲಾಶಯದಲ್ಲಿರುವ ನೀರಿನ ಸಂಗ್ರಹ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾದಲ್ಲಿ ಹೆಚ್ಚುವರಿ ನೀರನ್ನು ಹೊರಬಿಡಬೇಕಾಗಿದೆ. ಅದರಂತೆ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳನ್ನು ಸೇರಿಕೊಳ್ಳಬೇಕು. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು. ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರು ಸಹಕರಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕ.ನೀ.ನಿ.ನಿ. ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಡಿಸಿಎಂ ಚರ್ಚೆ
- ಇಡಿ ಯಿಂದ ಡಿ.ಕೆ.ಸುರೇಶ್ ವಿಚಾರಣೆ
- ಇಂದು ಅಮರನಾಥನ ದರ್ಶನಕ್ಕೆ ಹೊರಟ 7500 ಭಕ್ತರು
- ಗಾಂಜಾ ನಾಶಕ್ಕೆ ಟೊಂಕ ಕಟ್ಟಿ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
- ಬಿಹಾರ ಮಹಿಳೆಯರಿಗೆ ಮಾತ್ರ ಉದ್ಯೋಗ ಮೀಸಲಾತಿ : ನಿತೀಶ್ ಕುಮಾರ್ ಘೋಷಣೆ