ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ : ಸಿಎಂ ಹರ್ಷ

Social Share

ಹಾವೇರಿ,ಫೆ.1- ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.

ಇಂದು ಬೆಂಗಳೂರಿನಿಂದ ಬ್ಯಾಡಗಿ ತಾಲ್ಲೂಕಿನ ಶಿಡೇನೂರು ಗ್ರಾಮಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಕ್ಟರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ ಎಂದರು.

ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ರಸ್ತಾವನೆ ಕಳಿಸಿದ್ದೆವು. ಹೀಗಾಗಿ ಬಜೆಟ್‍ನಲ್ಲಿ 5300 ಕೋಟಿ ಘೋಷಣೆ ಮಾಡಿದ್ದಾರೆ ಎಂದು ಹೇಳಿದರು.
ಕರ್ನಾಟಕದ ಹಲವಾರು ಯೋಜನೆಗಳಲ್ಲಿ ಇದು ಮೊದಲು ರಾಷ್ಟ್ರೀಯ ಯೋಜನೆ. ಈ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಅನುದಾನ ಘೋಷಣೆ ಮಾಡಿದ್ದು ಸಂತಸದ ಸಂಗತಿ ಎಂದರು.

ಉಚಿತ ಪಡಿತರ ಯೋಜನೆ ಇನ್ನೂ 1 ವರ್ಷ ವಿಸ್ತರಣೆ

ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ಭೂ ಸ್ವಾದೀನಕ್ಕೆ ರೈತರ ವಿರೋಧ ವಿಚಾರಕ್ಕೆ ಸಂಬಂಸಿದಂತೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಫಲವತ್ತಾದ ಭೂಮಿ ಇರುವ ಕಾರಣ ರೈತರು ವಿರೋಧ ಮಾಡಿದ್ದಾರೆ. ಎಲ್ಲಿ ಫಲವತ್ತಾದ ಭೂಮಿ ಇರುತ್ತದೆ, ಅದನ್ನು ತೆಗೆದುಕೊಳ್ಳದೆ ಬಂಜರು ಭೂಮಿ ತಗೊಂಡು ಕೈಗಾರಿಕಾ ಕಾರಿಡಾರ್ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವೆ ಎಂದರು. ಹೀಗಾಗಿ ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್‍ಗೆ ಭೂ ಸ್ವಾೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಬೇರೆ ಕಡೆ ಎಲ್ಲಿ ಕಾರಿಡಾರ್ ಮಾಡಬೇಕು ಎಂಬುದರ ಬಗ್ಗೆ ಜಮೀನು ಹುಡುಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ರೈಲ್ವೇ ಇಲಾಖೆಗೆ 2.40 ಲಕ್ಷ ಕೋಟಿ ರೂ.ಗಳ ಕೊಡುಗೆ

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಡೇನೂರು ಗ್ರಾಮದ ಶ್ರೀ ಮುಕ್ತೇಶ್ವರ ದೇವಸ್ಥಾನದ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Bhadra, Upland Project, central budget, CM Bommai,

Articles You Might Like

Share This Article