Sunday, May 19, 2024
Homeರಾಷ್ಟ್ರೀಯಮೃತ ರೈತನ ಸಹೋದರಿಗೆ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸರ್ಕಾರ

ಮೃತ ರೈತನ ಸಹೋದರಿಗೆ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸರ್ಕಾರ

ಚಂಡೀಗಢ, ಫೆ 23:ಖಾನೌರಿ ಗಡಿ ಬಿಂದುವಿನಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಸಹೋದರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು 1 ಕೋಟಿ ರೂಪಾಯಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದಾರೆ.

ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಸಾವನ್ನಪ್ಪಿದ್ದು, 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರತಿಭಟನಾ ನಿರತ ರೈತರು ಪೊಲೀಸರ ಬ್ಯಾರಿಕೇಡ್‍ಗಳನ್ನು ಗುದ್ದಿ ಪಕ್ಕಕ್ಕೆ ತಳ್ಳಲುಯತ್ನಿಸಿದಾಗ ಈ ಘಟನೆ ನಡೆದಿದೆ.

ಆರ್ಥಿಕ ಸಬಲರಿಂದಲೇ ಕಾರ್ಮಿಕರಾಗಿ ನೋಂದಣಿ: ಸಂತೋಷ್ ಲಾಡ್

ಖಾನೌರಿ ಗಡಿಯಲ್ಲಿ ನಡೆದ ರೈತ ಚಳವಳಿಯಲ್ಲಿ ಮೃತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿ ಪಂಜಾಬ್ ಸರ್ಕಾರದಿಂದ 1 ಕೋಟಿ ರೂ ಆರ್ಥಿಕ ನೆರವು ಮತ್ತು ಅವರ ತಂಗಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

RELATED ARTICLES

Latest News