Thursday, May 2, 2024
Homeಮನರಂಜನೆಆಗಸ್ಟ್ 15ಕ್ಕೆ ತೆರೆ ಮೇಲೆ ಭೈರತಿ ರಣಗಲ್ ಆರ್ಭಟ

ಆಗಸ್ಟ್ 15ಕ್ಕೆ ತೆರೆ ಮೇಲೆ ಭೈರತಿ ರಣಗಲ್ ಆರ್ಭಟ

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ಭೈರತಿ ರಣಗಲ್ ಚಿತ್ರ ಆಗಸ್ಟ್ 15 ಸ್ವತಂತ್ರ ದಿನಾಚರಣೆ ದಿವಸ ಬಿಡುಗಡೆಯಾಗುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಭಿನಯಿಸುವಾಗಲೇ ಅದೇನೋ ಆ ಪಾತ್ರವನ್ನು ಇಷ್ಟಪಡತೊಡಗಿದೆ. ಅದಕ್ಕೆ ಆ ಹೆಸರು ಸಹ ಕಾರಣ. ಈ ತರಹದ ಹೆಸರು ಕೇಳೋಕೆ ಸಾಧ್ಯ ಇಲ್ಲ. ಇನ್ನು, ಸಂಭಾಷಣೆ ಚೆನ್ನಾಗಿತ್ತು. ಅಲ್ಲಿದ್ದ ಭೈರತಿ ರಣಗಲ್ನ ಸಣ್ಣ ಕಥೆಯನ್ನು ಇಲ್ಲಿ ಬೆಳೆಸಿದ್ದಾರೆ. ಯಾಕೆ ಅವನು ಭೈರತಿ ರಣಗಲ್ ಆಗುತ್ತಾನೆ. ಜನರಿಗೆ ಯಾಕೆ ಅವನನ್ನು ಕಂಡರೆ ಅಷ್ಟು ಪ್ರೀತಿ ಎಂದು ಹೇಳಲಾಗಿದೆ. ಹೆಚ್ಚು ಆಡಂಬರವಿಲ್ಲದೆ, ಸರಳವಾಗಿ ಈ ವಿಷಯವನ್ನು ಹೇಳಲಾಗಿದೆ. ಇಲ್ಲಿ ಎಷ್ಟು ಮಾತು ಬೇಕೋ, ಅಷ್ಟಿದೆ. ಬಹಳ ಚೆನ್ನಾಗಿದೆ ಕಥೆ ಮಾಡಿಕೊಂಡಿದ್ದಾರೆ ನಿರ್ದೇಶಕ ನರ್ತನ್ ಎಂದರು ಶಿವಣ್ಣ.

ಈ ವೇಳೆ ಮಾತನಾಡಿದ ನಿರ್ದೇಶಕ ನರ್ತನ್, ಮಫ್ತಿ ಚಿತ್ರ ಮಾಡುವಾಗಲೇ, ಆ ಪಾತ್ರದ ತೂಕ ಹೆಚ್ಚಿತ್ತು. ಚಿತ್ರ ನೋಡಿದಾಗ ಜನರಿಗೆ ಸಾಕಾಗಲಿಲ್ಲ. ಏಕೆಂದರೆ, ಶಿವಣ್ಣ ಅವರ ಪಾತ್ರ ಇಂಟರ್ವಲ್ ನಂತರ ಬರುತ್ತದೆ. ಈ ಪಾತ್ರವನ್ನು ಇಷ್ಟಕ್ಕೇ ಮುಗಿಸಬಾರದು, ಇದರ ಹಿನ್ನೆಲೆ ಏನಾದರೂ ಬರೆಯಬೇಕು ಎಂದಾಗ ರಣಗಲ್ ಹಿಂದಿನ ಕಥೆ ಸೃಷ್ಟಿಯಾಯಿತು. ಪೆನ್ ಹಿಡಿದಾಗ ಬಹಳ ಸಲೀಸಾಗಿ ಕಥೆ ಸೃಷ್ಟಿಯಾಯಿತು. ಭೈರತಿ ರಣಗಲï ಗ್ಯಾಂಗ್ಸ್ಟರ್ ಆಗಿದ್ದು ಹೇಗೆ? ಆ ಬ್ಲಾಕ್ ಡ್ರೆಸ್ ಯಾಕೆ ಹಾಕುತ್ತಾರೆ ಎನ್ನುವುದೇ ಚಿತ್ರದ ಕಥೆ.ಈಗಾಗಲೇ 70 ರಷ್ಟು ಚಿತ್ರ ಮುಗಿದಿದೆ ಎಂದರು.

ನಮ್ಮ ಚಿತ್ರ ಆಗಸ್ಟ್ 15ರಂದು ತೆರೆಗೆ ಬರುತ್ತಿದೆ. ಆಗಸ್ಟ್ ನಲ್ಲಿ ಸಾಲುಸಾಲು ರಜೆಗಳಿವೆ. ಸಾಮಾನ್ಯವಾಗಿ ಸತತವಾಗಿ ರಜೆ ಸಿಕ್ಕರೆ, ಜನ ಚಿತ್ರಮಂದಿರಕ್ಕೆ ಬರುತ್ತಾರೆ ಎಂಬ ದೃಷ್ಟಿಯಿಂದ ಆಗಸ್ಟ್ 15 ರಂದು ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್ ತಿಳಿಸಿದರು.ಚಿತ್ರದಲ್ಲಿ ಶಿವರಾಜ್ ಕುಮಾರ್, ರುಕ್ಮಿಣಿ ವಸಂತ್, ರಾಹುಲ್ ಬೋಸ್, ಅವಿನಾಶ್ , ದೇವರಾಜï, ಮಧು ಗುರುಸ್ವಾಮಿ, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ ಮುಂತಾದವರು ಅಭಿನಯಿಸುತ್ತಿದ್ದಾರೆ. ಭೈರತಿ ರಣಗಲï ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.

RELATED ARTICLES

Latest News