ಭಾರತ್ ಜೋಡೋ ಒಂದು ಫ್ಲಾಪ್ ಶೋ ಅಷ್ಟೇ : ಅರುಣ್‍ಸಿಂಗ್

Social Share

ಹುಬ್ಬಳ್ಳಿ,ಅ.16- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಫ್ಲಾಪ್ ಶೋ ಆಗಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೊ ಯಾತ್ರೆಯಿಂದ ದೇಶಕ್ಕಾಗಲಿ ಅಥವಾ ಜನತೆಗಾಗಲಿ ನಯಾಪೈಸೆಯ ಲಾಭವಿಲ್ಲ.

ಇದು ರಾಹುಲ್ ಗಾಂಧಿ ನಡೆಸುತ್ತಿರುವ ಮುಂಜಾನೆ ಮತ್ತು ಸಂಜೆಯ ವಾಕಿಂಗ್ ಆಗಿದೆ ಎಂದು ವ್ಯಂಗ್ಯವಾಡಿದರು.
ಭಾರತ್ ಜೋಡೋ ಯಾತ್ರೆ ಪ್ರಾರಂಭದ ದಿನದಿಂದಲೇ ವಿಫಲವಾಗಿದೆ. ಹೀಗಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರತಿಯೊಬ್ಬರು 5 ಸಾವಿರ ಕಾರ್ಯಕರ್ತರನ್ನು ಕರೆತರಬೇಕೆಂದು ಕಟ್ಟಪ್ಪಣೆ ವಿಸಿದರು. ಆದರೂ ಜನರು ಬರುತ್ತಿಲ್ಲ ಎಂದು ಟೀಕಿಸಿದರು.

ಪರಸ್ಪರ ದೂರವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಒಂದುಗೂಡಿಸುವ ಯಾತ್ರೆ ಇದಾಗಿದೆ. ಅವರಿಬ್ಬರನ್ನು ಒಂದುಗೂಡಿಸುವಲ್ಲಿ ರಾಹುಲ್ ಗಾಂಧಿ ಸಾಕಾಗಿದ್ದಾರೆ. ಸ್ವತಃ ಕಾಂಗ್ರೆಸ್ ಪಕ್ಷದವರಿಗೂ ಈ ಯಾತ್ರೆ ಬೇಡವಾಗಿದೆ. ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ನಡೆಸುತ್ತಿರುವ ಹೋರಾಟ ಎಂದು ಅರುಣ್ ಸಿಂಗ್ ಆರೋಪಿಸಿದರು.

ನಾವು ಭಾರತ ಜೋಡೋ ಯಾತ್ರೆಗೆ ತಲೆಕೆಡಿಸಿಕೊಂಡಿಲ್ಲ.ಜನ ಸಂಕಲ್ಪ ಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಯಾತ್ರೆ ನಡೆಯಲಿದೆ ಎಂದು ಹೇಳಿದರು.

Articles You Might Like

Share This Article